ಕೋಟ: ಕೋಟ ತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಅ. 3 ರಿಂದ 10ತನಕ ನಡೆಯಲಿರುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮದ ಉದ್ಟಾಟನೆಯನ್ನು ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಕ್ಟೋಬರ್ 3ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದು. ಘನ ಉಪಸ್ಥಿತಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ನಲ್ನುಡಿ ಮಾತುಗಳನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರ ಶಾಸಕ ವಿ ಸುನೀಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಯಶ್‍ಪಾಲ್ ಎ ಸುವರ್ಣ, ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…