ಬೆಂಗಳೂರು : ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿದ್ದ ಅವರಿಗೆ ಕಳೆದ ಒಂದು ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದೆ. ಪರಿಸ್ಥಿತಿ ಕಷ್ಟವಿದೆ ಎಂದು ಹೇಳಿದ್ದರು
ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುಧೀಂದ್ರ ಹಾಲ್ದೊಡ್ಡೇರಿ ಅವರು ಹಲವು ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಾರರಾಗಿದ್ದರು. ಇನ್ನು ಹಾಲ್ದೊಡ್ಡೇರಿಯವರಿಗೆ ಅನುಪಮಾ ನಿರಂಜನ ವೈದ್ಯಕೀಯ ವಿಜ್ಞಾನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿ ಬಂದ ದಿನವೇ ವಿಧಿವಶರಾಗಿರುವುದು ಖೇದಕರವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…