ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸಿಎಂ ಪಟ್ಟ ಯಾರಿಗೆ ಒಲಿಯುತ್ತದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಕಾಲಜ್ಞಾನ ಗುರುಜಿ ಆಗಮಿಸಿ ಶುಭ ಹಾರೈಸಿದ್ದಾರೆ.
ಹಲವು ವರ್ಷಗಳಿಂದ ಡಿಕೆಶಿ ಅವರ ಭವಿಷ್ಯದ ಬಗ್ಗೆ ತಿಳಿಸುತ್ತಿದ್ದ ವಿಜಯ್‌ರಾಜ್ ಗುರೂಜಿ ಸೋಮವಾರ ಎಲೆಕ್ಟ್ರಾನಿಕ್ ಸಿಟಿಯಿಂದ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದಾರೆ. ಮುಂಜಾನೆ 4:15ರ ಸುಮಾರಿಗೆ ಆಗಮಿಸಿದ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆಶಿಗೆ ಶುಭ ಹಾರೈಸಿದ್ದಾರೆ.
ಕಾಲಜ್ಞಾನದ ಬಗ್ಗೆ ಪಾಂಡಿತ್ಯ ಪಡೆದಿರುವ ವಿಜಯ್‌ರಾಜ್ ಗುರೂಜಿ ಪ್ರಸ್ತುತ ಡಿಕೆಶಿಗೆ ಬುಧ ಮತ್ತು ಆದಿತ್ಯ ಪಂಚಮಯೋಗವಿದೆ ಎಂದು ತಿಳಿಸಿ ಅವರಿಗೆ ಹಾರ ಹಾಕಿ ಆಶಿರ್ವಾದ ಮಾಡಿ ಅಲ್ಲಿಂದ ತೆರಳಿದ್ದಾರೆ.
ನಿಮ್ಮ ಜಾತಕದಲ್ಲಿ ಗುರುವಾರದ ದಿನ ತುಂಬಾ ಒಳ್ಳೆಯದಿದೆ. ಅಂದೇ ಶುಭ ಕೆಲಸ ಆರಂಭಿಸಿ ಎಂಬ ಸಲಹೆಯನ್ನು ಡಿಕೆಶಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಗುರುವಾರ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಾ ಎಂಬ ಪ್ರಶ್ನೆಗೆ ಇಂದು ಅಥವಾ ನಾಳೆ ಉತ್ತರ ಸಿಗುವ ಸಾಧ್ಯತೆಯಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…