ಬೆಂಗಳೂರು: ಬಳ್ಳಾರಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆದುಕೊಂಡ ರೀತಿ ನೋಡಿದರೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವರಿಗೆ ಅವಕಾಶ ಮಾಡಿ ಕೊಡಬಾರದು. ಮುಖ್ಯಮಂತ್ರಿಯಾಗಿ ನೀವೇ ಎರಡೂವರೆ ವರ್ಷ ಮುಂದುವರಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಬಳ್ಳಾರಿ ಗಲಾಟೆ ಪ್ರಕರಣ ವಿಷಯ ಪ್ರಸ್ತಾಪಿಸಿದ ಜನಾರ್ದನ ರೆಡ್ಡಿ ಅವರು, ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಳ್ಳಾರಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನಡೆದುಕೊಂಡ ರೀತಿ ನೋಡಿದರೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವರಿಗೆ ಅವಕಾಶ ಮಾಡಿ ಕೊಡಬಾರದು. ಮುಖ್ಯಮಂತ್ರಿಯಾಗಿ ನೀವೇ ಎರಡೂವರೆ ವರ್ಷ ಮುಂದುವರಿಯಬೇಕು. ರಾಜ್ಯದ ಕಾನೂನನ್ನು ನೀವು ಕಾಪಾಡಿ. ವಿಶೇಷವಾಗಿ ಬಳ್ಳಾರಿಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಒಳ್ಳೆಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಬಳ್ಳಾರಿಯಲ್ಲಿ ಅಂದು ಎಲ್ಲರೂ ಮದ್ಯ ಕುಡಿದು ಬಂದಿದ್ದರು. ನೆರೆದಿದ್ದ ಜನ ಕಲ್ಲು ಹೊಡೆದರೆ. ಅಂಗರಕ್ಷಕರು ಗುಂಡು ಹಾರಿಸಿದರು. ಅದೆಲ್ಲವೂ ನಮ್ಮ ಮನೆಗೆ ಬಂದು ಹೊಡೆದಿದೆ. ಈ ಘಟನೆ ಸಂಬಂಧ ಫಾರೆನ್ಸಿಕ್ ಲ್ಯಾಬ್‌ನವರು ಬಂದು ಸಾಕ್ಷ್ಯ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ನಮ್ಮ ಮನೆಗೆ ಎಸ್’ಪಿ ಮತ್ತು ಐಜಿ ಬಂದರು. ಜನಾರ್ದನ ರೆಡ್ಡಿ ಅವರೇ ನೀವು ಹೆದರಬೇಡಿ ಎಂದರು. ಅವರಿಗೆ ಈಗಾಗಲೇ ವರದಿ ಬಂದಿರಬಹದು. ಎಸ್ಪಿ ಅವರನ್ನು ಸಸ್ಪೆಂಡ್ ಮಾಡಿದ್ದಾರೆ. ನಮ್ಮ ಮನೆ ಮೇಲೆ ಕಲ್ಲು ತೂರುತ್ತಿದ್ದರು. ಈ ವೇಳೆ ಪೊಲೀಸರು ಲಾಟಿ ಚಾರ್ಜ್ ಮಾಡುತ್ತಿದ್ದರು. ಈ ವೇಳೆ ವಾಪಸ್ ಓಡುವಾಗ ಗನ್ ಪಾಯಿಂಟ್‌ಗೆ ಸಿಕ್ಕಿ ಕಾರ್ಯಕರ್ತ ಸಾವನ್ನಪ್ಪಿದ್ದಾರೆ.
ಶಾಸಕ ಅಲ್ಲೇ ಇದ್ದ, ನನ್ನ ಮನೆ ಮುಂದೆಯೇ ಕಾರ್ಯಕರ್ತ ಅಸು ನೀಗಿದ್ದ. ಕಾರ್ಯಕರ್ತನ ಸಾವಿಗೆ ನಾವು ಕಾರಣ ಎಂದು ಮನೆ ಮುಂದೆ ಪ್ರತಿಭಟನೆ ಮಾಡಿದರು. ಜನಾರ್ದನ ರೆಡ್ಡಿ ಮನೆ ಮೇಲೆ ಸಾವಿರಾರು ಜನ ದಾಳಿ ಮಾಡಿದ್ದಾರೆ ಎಂದು ಎಸ್ಪಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಎಂ ಸೂಚನೆ ಮೇರೆಗೆ ಪೊಲೀಸರು ಕರ್ತವ್ಯ ಮಾಡಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಸ್ಟಾಂಡ್ ವಿತ್ ಅವರ್ ಎಂಎಲ್‌ಎ ಅಂತ ಹೇಳಿದ್ದಾರೆ. ಅವರು ಅವರ ಎಂಎಲ್‌ಎ ಅವರ ಪರವಾಗಿ ನಿಲ್ಲಲಿ. ಆದರೆ, ಎಂಥವರ ಪರ ನಿಲ್ಲಬೇಕು.? ನಾನೂ ಬಳ್ಳಾರಿಯಲ್ಲಿ ರಾಜಕಾರಣ ಮಾಡಿದ್ದೇನೆ. ಆದರೆ ನಿಮ್ಮ ಹುದ್ದೆಗೆ ನೀವು ಗೌರವ ಕೊಟ್ಟಿಲ್ಲ’ ಎಂದು ದೂರಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…