ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಮಾಜಿ ಸಿಎಂ ಎಸ್ಎಂ ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ ಎಸ್ಎಂ ಕೃಷ್ಣಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು.
ಡಿಕೆಶಿಯಿಂದ ಕಣ್ಣೀರ ಬೀಳ್ಕೊಡುಗೆ
ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದ ಬಳಿಕ, ಮೂರು ಬಾರಿ ಕುಶಾಲು ತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತ್ಯಕ್ರಿಯೆಗೊಂಡ ಅಂತಿಮ ನಮ ಸಲ್ಲಿಸಿದರು. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಗಮಿಸಿ ಗೌರವ ನಮನ ಸಲ್ಲಿಸುವ ವೇಳೆ SM ಕೃಷ್ಣ ಪಾರ್ಥಿವ ಶರೀರಕ್ಕೆ ನಮಿಸಿ ಕಣ್ಣೀರು ಹಾಕಿದರು. ತಮ್ಮ ರಾಜಕೀಯ ಗುರುವಿನ ಪಾರ್ಥಿವ ಶರೀರದ ಮುಂದೆ ಕಣ್ಣೀರಾಕಿ ವಾಪಸ್ಸಾದ ಘಟನೆ ನಡೆಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…