ಮಂಡ್ಯ: ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಟಕ್ಕರ್ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಡಿಕೆಶಿ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುವೆ ಎಂದಿದ್ದರು.
ನಾನೀಗ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಿಎಂ ಹುದ್ದೆ ಬಗ್ಗೆ ಈಗ ಮಾತನಾಡುವುದಿಲ್ಲ. ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಹಾಗೂ ನಾನು ಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗೆಂದು, ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದ್ದು ನಿಜ. ಆ ಕುರಿತು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ತಿಳಿಸುವೆ ಎಂದು ಹೇಳಿದ್ದರು.
ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…
ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…
ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…