ಬೆಂಗಳೂರು: ಪ್ಭಾವಿ ರಾಜಕಾರಣಿ, ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ಅವರಿಗೆ ಜಾಮೀನು ಸಿಗದಂತೆ ಮತ್ತು ಇ.ಡಿ. ಕಸ್ಟಡಿಗೆ ಒಪ್ಪಿಸುವಂತೆ ಪ್ರಬಲವಾಗಿ ವಾದ ಮಂಡಿಸಿದ್ದು, ನಮ್ಮ ರಾಜ್ಯದವರೇ ಆದ ಪುತ್ತೂರಿನ ಕೆ.ಎಂ. ನಟರಾಜ್.
ಡಿಕೆಶಿಗೆ ಜಾಮೀನು ಮಂಜೂರು ಮಾಡುವಂತೆ ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಪ್ರಬಲವಾಗಿ ವಾದಿಸಿದ್ದರು. ಮೊದಲ ಹಂತದಲ್ಲಿ ಯಶಸ್ವಿಯೂ ಆಗಿದ್ದಾರೆ. ಏಕೆಂದರೆ ಡಿಕೆಶಿ ಅವರನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ 10 ದಿನಗಳ ಕಾಲ ಇ.ಡಿ. ವಶಕ್ಕೆ ಒಪ್ಪಿಸಿತು.
10 ದಿನ ಇ.ಡಿ. ವಶಕ್ಕೆ ಒಪ್ಪಿಸಿದ ನ್ಯಾಯಾಲಯ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕವಾಗಿರುವ ವಕೀಲ ಕೆ.ಎಂ. ನಟರಾಜ್ ಅವರು ಪುತ್ತೂರಿನವರು. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಶೇಷ ಅಭಿಯೋಜಕರಾಗಿದ್ದರು. ನಟರಾಜ್ ಸಮರ್ಥ ವಾದವನ್ನು ಗಮನಿಸಿದ್ದ ಮೋದಿ ಸರ್ಕಾರ ಅಡಿಷನಲ್ ಸಾಲಿಸಿಟರ್ ಜನರಲ್ ದಕ್ಷಿಣ ಭಾರತಕ್ಕೆ ನೇಮಿಸಿತ್ತು. ನಂತರ ಇದೀಗ ಇಡಿ, ಐಟಿ, ಸಿಬಿಐ ಪ್ರಕರಣಗಳಿಗಾಗೆ ಅಡಿಷನಲ್ ಸಾಲಿಸಿಟರ್ ಜನರಲ್ ಸುಪ್ರೀಂಕೋರ್ಟ್ ಆಗಿ ನೇಮಕ ಮಾಡಲಾಗಿದೆ. ಇಡಿ, ಐಟಿ, ಸಿಬಿಐ ಕೇಸುಗಳ ವಾದ ಮಂಡನೆಯಲ್ಲಿ ನಟರಾಜ್ ಪ್ರಬಲ ವಕೀಲರು ಎನಿಸಿಕೊಂಡಿದ್ದಾರೆ. ಇಂದೂ ಕೂಡ ಡಿಕೆಶಿ ಪರ ವಕೀಲರಿಗೆ ಎದುರಾಗಿ ಸಮರ್ಥವಾಗಿ ವಾದ ಮಂಡಿಸಿ ಸೈ ಎನಿಸಿಕೊಂಡಿದ್ದಾರೆ.
2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಚ್ಛ ನ್ಯಾಯಾಲಯದ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಕೆ.ಎಂ ನಟರಾಜ್, ದತ್ತ ಪೀಠ, ಚರ್ಚ್ಗಳ ಮೇಲಿನ ದಾಳಿ ಸೇರಿದಂತೆ ಹೈ ಟೆನ್ಷನ್ ಪ್ರಕರಣಗಳಲ್ಲಿ ಸರ್ಕಾರದ ಪರ ವಾದ ಮಂಡಿಸಿದ್ದರು.
ಹೀಗಾಗಿ ಇಂದು ಕೆ.ಎಂ.ನಟರಾಜ್, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣ ಸಾಗಾಣಿಕೆ ಪ್ರಕರಣದಲ್ಲಿ ಇಡಿ ಇಲಾಖೆಯ ಪರ ವಾದ ಮಂಡಿಸಿದ್ದಾರೆ. ಕೆ.ಎಂ.ನಟರಾಜ್ ಮಂಡಿಸಿದ ವಾದದ ಪರಿಣಾಮ ಅಜಯ್ಕುಮಾರ್ ಕುಹಾರ್ ನೇತೃತ್ವದ ಏಕಸದಸ್ಯ ಪೀಠ ಶಿವಕುಮಾರ್ರನ್ನು 9 ದಿನಗಳ ಕಾಲ ಇಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…