ಬೆಂಗಳೂರು: ಬಹುನಿರೀಕ್ಷಿತ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಬಹುತೇಕ ಅಂತಿಮಗೊಂಡಿದ್ದು, ಶುಕ್ರವಾರ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆಯಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಗುರುವಾರ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ರಾಜ್ಯ ಉಸ್ತುವಾರಿ ಸಚಿವ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಿದರು.
ಕೆಪಿಸಿಸಿ ಹೊಸ ಸಾರಥಿ ಆಯ್ಕೆ ವಿಚಾರ ಮಾಜಿ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಮೂಲ ಕಾಂಗ್ರೆಸಿಗ ನಡುವೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ರಾಜ್ಯದಲ್ಲಿ ಪಕ್ಷದ ಮೇಲಿನ ಬಿಗಿ ಹಿಡಿತ ಮುಂದುವರಿಯಲು ತಮಗೆ ಆಪ್ತರಾದವರೇ ಗಾದಿ ಹಿಡಿಯಬೇಕು ಎಂದು ಸಿದ್ದರಾಮಯ್ಯ ಬಯಸಿದ್ದರು. ಮತ್ತೊಂದೆಡೆ, ಪಕ್ಷದ ಮೇಲೆ ಸಿದ್ದರಾಮಯ್ಯ ಪ್ರಾಬಲ್ಯ ತಗ್ಗಿಸಲು ಮೂಲ ಕಾಂಗ್ರೆಸಿಗರೇ ಆಗಬೇಕೆಂದು ಹಿರಿಯ ನಾಯಕರು ಪ್ರಯತ್ನ ನಡೆಸಿದ್ದರು.
ಉಪಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದು, ಬಳಿಕ ಹಲವು ಮಂದಿ ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಮುಂದಾಗಿದ್ದರು. ಆದರೆ ಅಂತಿಮವಾಗಿ ಎಐಸಿಸಿ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಿದೆ ಎಂದು ಹೇಳಲಾಗಿದ್ದು, ಇಂದು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…