ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ. ಇತ್ತ ಕರ್ನಾಟಕ ಹೈಕೋರ್ಟ್ ನ್ಯಾ. ಅರವಿಂದ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಆಗುವರೆಗೂ ಹೊಸ ಸಮನ್ಸ್ ನೀಡುವಂತಿಲ್ಲ ಎಂದು ಇಡಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ದೆಹಲಿ ಹೈಕೋರ್ಟ್ ಆದೇಶವನ್ನು ನ್ಯಾ. ರೋಹಿಂಗ್ಟನ್ ನಾರಿಮನ್ ಪೀಠ ಎತ್ತಿ ಹಿಡಿದಿದೆ. ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ನೀವು ದೇಶದ ನಾಗರಿಕರೊಂದಿಗೆ ವ್ಯವಹರಿಸುವ ವಿಧಾನ ಇದಲ್ಲ ಎಂದು ಹೇಳಿದೆ.
ಇಡಿ ಮೇಲ್ಮನವಿ ಪ್ರಕರಣದಲ್ಲಿ ಡಿಕೆಶಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದ ಸರ್ವೋಚ್ಛ ನ್ಯಾಯಾಲಯ, ನಾವು ಡಿಕೆಶಿಗೆ ಯಾವುದೇ ನೋಟಿಸ್ ನೀಡಿಲ್ಲ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾ. ರೋಹಿಂಗ್ಟನ್ ನಾರಿಮನ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಸ್ಪಷ್ಟನೆ ನೀಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…