Featured

ಡಿಕೆಶಿ ಜಾಮೀನು ರದ್ದು ಕೋರಿ ಇಡಿ ಸಲ್ಲಿಸಿದ್ದಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ -Vishwanews24

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ. ಇತ್ತ ಕರ್ನಾಟಕ ಹೈಕೋರ್ಟ್ ನ್ಯಾ. ಅರವಿಂದ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಆಗುವರೆಗೂ ಹೊಸ ಸಮನ್ಸ್ ನೀಡುವಂತಿಲ್ಲ ಎಂದು ಇಡಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.

ದೆಹಲಿ ಹೈಕೋರ್ಟ್ ಆದೇಶವನ್ನು ನ್ಯಾ. ರೋಹಿಂಗ್ಟನ್‌ ನಾರಿಮನ್‌ ಪೀಠ ಎತ್ತಿ ಹಿಡಿದಿದೆ. ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್‌, ನೀವು ದೇಶದ ನಾಗರಿಕರೊಂದಿಗೆ ವ್ಯವಹರಿಸುವ ವಿಧಾನ ಇದಲ್ಲ ಎಂದು ಹೇಳಿದೆ.

ಇಡಿ ಮೇಲ್ಮನವಿ ಪ್ರಕರಣದಲ್ಲಿ ಡಿಕೆಶಿಗೆ ಸುಪ್ರೀಂಕೋರ್ಟ್ ನೋಟಿಸ್‌ ನೀಡಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದ ಸರ್ವೋಚ್ಛ ನ್ಯಾಯಾಲಯ, ನಾವು ಡಿಕೆಶಿಗೆ ಯಾವುದೇ ನೋಟಿಸ್‌ ನೀಡಿಲ್ಲ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾ. ರೋಹಿಂಗ್ಟನ್‌ ನಾರಿಮನ್‌ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಸ್ಪಷ್ಟನೆ ನೀಡಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

5 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

10 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

10 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

10 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago