ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು: VISHWANEWS24

ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು

ಉಡುಪಿ : ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ರವರ ಪದಗ್ರಹಣ ಪ್ರತಿಜ್ಞಾ ದಿನ ಕಾರ್ಯಕ್ರಮವನ್ನು ಉಡುಪಿ ನಗರಸಭೆಯ ಮಾಜಿ ಸದಸ್ಯರುಗಳು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿಯ ಫಿಷ್ ಹೌಸ್ ಹೋಟೆಲ್ ನ ಸಭಾಂಗಣದಲ್ಲಿ ವೀಕ್ಷಿಸಿ ಸಂಭ್ರಮಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಯವೀರ್ ಫೆಡ್ರಿಕ್ಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಚಾಲನೆಯನ್ನು ನೀಡಿದರು. ಕೆಪಿಸಿಸಿ ಸೂಚನೆಯಂತೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಯ ನಡುವೆ ಸಂವಿಧಾನದ ಪೀಠಿಕೆಯ ಪಠಣ ಮತ್ತು ಸಾಮೂಹಿಕ ಪ್ರತಿಜ್ಞೆಯನ್ನು ನಡೆಸಲಾಯಿತು. ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ತಿಳಿಸಿದಾಗ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತಿನ ಬಳಿಕ ನಗರಸಭಾ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕರ್ತರು ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿ ಪಟಾಕಿ ಸಿಡಿಸಿ, ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಹಾಕಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾಜಿ ನಗರ ಸಭಾ ಸದಸ್ಯರಾದ ಶಶಿರಾಜ್ ಕುಂದರ್, ಸುಖೇಶ್ ಕುಂದರ್, ವಿಜಯ ಪೂಜಾರಿ ಮಂಚಿ, ಚಂದ್ರಕಾಂತ ನಾಯಕ್, ಉಡಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಪ್ರದೀಪ್ ಕುಂಜಿಬೆಟ್ಟು, ಕಾಂಗ್ರೆಸ್ ಯುವ ಮುಖಂಡರುಗಳಾದ ನೀರಜ್ ಪಾಟೀಲ್, ಪ್ರಣಮ್ ಕಸ್ತೂರ್ಬ ನಗರ, ಸುದಾಕರ ಪೂಜಾರಿ ಪರ್ಕಳ, ಬೋನಿ ಪಾಯಸ್ ಸರಳೇಬೆಟ್ಟು, ಗಣೇಶ್ ಶೆಟ್ಟಿಬೆಟ್ಟು, ಅಶೋಕ್ ಕೆ.ಪಿ, ಹರೀಶ್ ನಾಯಕ್, ದಿನೇಶ್ ಪೂಜಾರಿ, ಅನಿಲ್ ಕುಮಾರ್, ಸುಪ್ರೀತ್ ಸುವರ್ಣ, ಪ್ರಸನ್ನ ಕುಮಾರ್, ಮೋಹನ್ ಸೋನ್ಸ್ , ಸಂದೇಶ್ ಪೂಜಾರಿ, ವಸಂತ ಕುಮಾರ್, ಚರಿತ್ ಪೂಜಾರಿ, ರಾಘು ಸನಿಲ್ ಕುತ್ಪಾಡಿ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

21 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

21 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

21 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

22 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

22 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

22 hours ago