ಬೆಂಗಳೂರು: ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರು ಯಾವತ್ತೂ ಸಂಭ್ರಮಾಚರಣೆ ಮಾಡಿಲ್ಲ. ಯಾರು ತಪ್ಪು ಮಾಡಿರ್ತಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಯಾವುದೇ ತಪ್ಪು ಮಾಡಿಲ್ಲ ಅಂದರೇ ಇಡಿ ಕೇಳಿರುವ ದಾಖಲೆಗಳನ್ನ ತೋರಿಸಲಿ. ಸಮರ್ಪಕವಾಗಿ ಉತ್ತರ ಕೊಟ್ಟು ಹೊರ ಬಂದರೆ ಡಿ.ಕೆ ಶಿವಕುಮಾರ್ ರನ್ನ ನಾವೂ ಸ್ವಾಗತಿಸುತ್ತೇವೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಹೇಳಿದರು.
ಪಿ.ಚಿದಂಬರಂ ಅವರು ಒಳ್ಳೆ ಹಣಕಾಸು ಸಚಿವ ಅಂತ ಹೆಸರಿತ್ತು. ಆದರೆ ಈಗ ಏನಾಗಿದೆ, ಎಷ್ಟೋ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಈಗ ಕಾಂಗ್ರೆಸ್ ನವರು ಬಿಜೆಪಿ ಮೇಲೆ ಗೂಬೆ ಕೂರಿಸೋದು ಸರಿಯಲ್ಲ. ಯಾವುದೇ ಪಕ್ಷದವರು ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು ಎಂದರು.
ಕೋಲಿ ಸಮುದಾಯದ ಮುಖಂಡರಿಗೆ ಭರವಸೆ ನೀಡಿದ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಮಾಲಿಕಯ್ಯ ಗುತ್ತೇದಾರ್, ಡಾ.ಎ.ಬಿ. ಮಾಲಕರೆಡ್ಡಿ ನೇತೃತ್ವದ ನಿಯೋಗವು ಕಲಬುರ್ಗಿ ಜಿಲ್ಲೆಯ ವಿವಿಧ ಸಮಸ್ಯೆ ಹಾಗೂ ಕೋಲಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡುವ ಬಗ್ಗೆ ಚರ್ಚೆ ನಡೆಸಿತು.ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಭರವಸೆ ನೀಡಿದರು.
ಬಿಜೆಪಿ ಶಿಸ್ತಿನ ಪಕ್ಷ. ಯಾವತ್ತೂ ಕೂಡ ಬಿಜೆಪಿ ಸೇಡಿನ ರಾಜಕಾರಣ ಮಾಡಿಲ್ಲ. ಯಾಕಾಗಿ ಕಾಂಗ್ರೆಸ್‌ನವರು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೋ ಗೊತ್ತಿಲ್ಲ. ಡಿಕೆಶಿಯವರು ಹೊರಗೆ ಬರಲಿ ಅಂತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಡಿಕೆಶಿ ನನಗೆ ಒಳ್ಳೆಯ ಸ್ನೇಹಿತರು. ಅವರ ಬಗ್ಗೆ ನನಗೆ ಗೌರವ ಇದೆ ಎಂದು ಸಚಿವ ವಿ. ಸೋಮಣ್ಣ ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…