Featured

ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರು ಯಾವತ್ತೂ ಸಂಭ್ರಮಾಚರಣೆ ಮಾಡಿಲ್ಲ , ಯಾವುದೇ ಪಕ್ಷದವರು ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು : ಮಾಲೀಕಯ್ಯ ಗುತ್ತೇದಾರ್ -Vishwanews24

ಬೆಂಗಳೂರು: ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರು ಯಾವತ್ತೂ ಸಂಭ್ರಮಾಚರಣೆ ಮಾಡಿಲ್ಲ. ಯಾರು ತಪ್ಪು ಮಾಡಿರ್ತಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಯಾವುದೇ ತಪ್ಪು ಮಾಡಿಲ್ಲ ಅಂದರೇ ಇಡಿ ಕೇಳಿರುವ ದಾಖಲೆಗಳನ್ನ ತೋರಿಸಲಿ. ಸಮರ್ಪಕವಾಗಿ ಉತ್ತರ ಕೊಟ್ಟು ಹೊರ ಬಂದರೆ ಡಿ.ಕೆ ಶಿವಕುಮಾರ್ ರನ್ನ ನಾವೂ ಸ್ವಾಗತಿಸುತ್ತೇವೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಹೇಳಿದರು.

ಪಿ.ಚಿದಂಬರಂ ಅವರು ಒಳ್ಳೆ ಹಣಕಾಸು ಸಚಿವ ಅಂತ ಹೆಸರಿತ್ತು. ಆದರೆ ಈಗ ಏನಾಗಿದೆ, ಎಷ್ಟೋ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಈಗ ಕಾಂಗ್ರೆಸ್ ನವರು ಬಿಜೆಪಿ ಮೇಲೆ ಗೂಬೆ ಕೂರಿಸೋದು ಸರಿಯಲ್ಲ. ಯಾವುದೇ ಪಕ್ಷದವರು ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು ಎಂದರು.

ಕೋಲಿ‌ ಸಮುದಾಯದ ಮುಖಂಡರಿಗೆ ಭರವಸೆ ನೀಡಿದ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಮಾಲಿಕಯ್ಯ ಗುತ್ತೇದಾರ್, ಡಾ.ಎ.ಬಿ. ಮಾಲಕರೆಡ್ಡಿ ನೇತೃತ್ವದ ನಿಯೋಗವು ಕಲಬುರ್ಗಿ ಜಿಲ್ಲೆಯ ವಿವಿಧ ಸಮಸ್ಯೆ ಹಾಗೂ ಕೋಲಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡುವ ಬಗ್ಗೆ ಚರ್ಚೆ ನಡೆಸಿತು.ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಭರವಸೆ ನೀಡಿದರು.

ಬಿಜೆಪಿ ಶಿಸ್ತಿನ ಪಕ್ಷ. ಯಾವತ್ತೂ ಕೂಡ ಬಿಜೆಪಿ ಸೇಡಿನ ರಾಜಕಾರಣ ಮಾಡಿಲ್ಲ. ಯಾಕಾಗಿ ಕಾಂಗ್ರೆಸ್‌ನವರು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೋ ಗೊತ್ತಿಲ್ಲ. ಡಿಕೆಶಿಯವರು ಹೊರಗೆ ಬರಲಿ ಅಂತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಡಿಕೆಶಿ ನನಗೆ ಒಳ್ಳೆಯ ಸ್ನೇಹಿತರು. ಅವರ ಬಗ್ಗೆ ನನಗೆ ಗೌರವ ಇದೆ ಎಂದು ಸಚಿವ ವಿ. ಸೋಮಣ್ಣ ಹೇಳಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

8 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

9 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

10 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago