ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ಹೇಳಿಕೆ ನೀಡಿದ್ದು ಸಾಬೀತಾದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಸ್ಫೋಟಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಸಿರುವ ಉಗ್ರಪ್ಪ, ಡಿ.ಕೆ.ಶಿವಕುಮಾರ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಆ ರೀತಿ ಮಾತನಾಡಬೇಡ, ಅವರು ಯಾವ ಪರ್ಸಂಟೇಜ್ ಗೂ ಬೆಂಬಲ ನೀಡಲ್ಲ ಎಂದು ಸಲೀಂ ಗೆ ಹೇಳಿದ್ದೇನೆ ಹೊರತು ನಾನು ಅವರ ಬಗ್ಗೆ ಮಾತನಾಡಿಲ್ಲ. ಇನ್ನು ಸಲೀಂ ಹೇಳಿಕೆ ಬಗ್ಗೆ ಅವ್ರನ್ನೇ ಕೇಳಿ” ಎಂದರು.
ಕೆಪಿಸಿಸಿ ಕಚೇರಿಯಲ್ಲಿಯೇ ನಡೆದ ಸಭೆ ವೇಳೆ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಡಿ.ಕೆ.ಶಿವಕುಮಾರ್ ಬಗ್ಗೆ ಚರ್ಚೆ ನಡೆಸಿದ್ದು, ಡಿಕೆಶಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿದ್ದರಾಮಯ್ಯ ಖಡಕ್ ವ್ಯಕ್ತಿಯಂದು ಹೊಗಳಿದ್ದರು. ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. 6-8 ಪರ್ಸೆಂಟ್ ಇರುವುದನ್ನು 12 ಪರ್ಸೆಂಟ್ ಮಾಡಿದ್ದಾರೆ. ಕೋಟಿ ಕೋಟಿ ಡೀಲ್ ಮಾಡುತ್ತಾರೆ ಎಂದು ಸಲೀಂ ಹೇಳಿದ್ದು,ಇದಕ್ಕೆ ಉಗ್ರಪ್ಪ ಪ್ರತಿಕ್ರಿಯಿಸಿ ನಾವೆಲ್ಲ ಪಟ್ಟು ಹಿಡಿದು ಡಿಕೆಶಿಯನ್ನು ಅಧ್ಯಕ್ಷರನ್ನಾಗಿ ಮಾಡಿದೆವು ಈಗ ನಮ್ಮ ಬುಡಕ್ಕೆ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು .
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…