ಡಿಕೆಶಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್ – Vishwanews24
ಡಿಕೆಶಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್
ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಇದ್ದರು.
ಶಿವಮೊಗ್ಗದ ಹಿರಿಯ ನಾಯಕರಾದ ಶ್ರೀ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದೆ. ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು… pic.twitter.com/8rKzBkSXBq
— DK Shivakumar (@DKShivakumar) August 24, 2023
ಕಾರ್ಮಿಕರ ಹೋರಾಟದ ಹಿನ್ನಲೆಯಿಂದ ಬಂದವನು ನಾನು. ಇವರ ಯೋಜನೆಗಳನ್ನು ನೋಡಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ನಾನು ಮತ್ತು ನನ್ನ ಗೆಳೆಯರು ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.
ಮೂಡುಬಿದಿರೆ: ಮತ್ತೆ ನೈತಿಕ ಪೊಲೀಸ್ ಗಿರಿ ; ಮೂವರ ಬಂಧನ – Vishwanews24
