ಬೆಂಗಳೂರು: ಅತೃಪ್ತರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಡಿಕೆಶಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಈ ಕುರಿತು ಅಸಮಾಧಾನ ಹೊರ ಹಾಕಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ..
ಮುಂಬೈನಲ್ಲಿ ಡಿಕೆ ಶಿವಕುಮಾರ್ ಅವರನ್ನು ಹೋಟೆಲ್ ಒಳಗೂ ಸೇರಿಸಿಲ್ಲ, ಜತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಭಿನ್ನಮತ ವ್ಯಕ್ತಪಡಿಸಿದ್ದಾರೆ .
ಸಭೆಯೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ , ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಗೆ ನಾನೇ ಕಾರಣ ಎಂಬಂತೆ ಕೆಲವರು ಆರೋಪಿಸುತ್ತಿದ್ದಾರೆ. ಆದರೆ ನಾನು ಮೊದಲಿನಿಂದಲೂ ಅತೃಪ್ತರನ್ನು ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿಭಾಯಿಸಿದ್ದೇನೆ. ಕೆಲ ತಿಂಗಳ ಹಿಂದೆ ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಸಚಿವ ಡಿ.ಕೆ ಶಿವಕುಮಾರ್ ಮೂಗು ತೂರಿಸುತ್ತಿದ್ದಾರೆಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ವಿಚಾರವಾಗಿಯೂ ನನ್ನನ್ನು ದೂಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು..
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…