Featured

ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅಕ್ಟೋಬರ್ 15 ರವರೆಗೆ ವಿಸ್ತರಣೆ -Vishwanews24

ನವದೆಹಲಿ,:ಜಾರಿ ನಿದೇರ್ಶನಾಲಯ(ಜಾರಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರವರೆಗೆ ವಿಸ್ತರಣೆಯಾಗಿದೆ.

ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್​ಕುಮಾರ್ ಕುಹರ್​ ಅವರು ಡಿ.ಕೆ.ಶಿವಕುಮಾರ್​ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಡಿಕೆಶಿ ಅವರಿಗೆ ಜಾಮೀನು ನೀಡುವ ಕುರಿತು, ಇಡಿ ಪರ ವಾದ ಮಂಡಿಸಿದ ವಕೀಲ ನಾಗರಾಜ್, “ನ್ಯಾಯಾಂಗ ಬಂಧನದ ವೇಳೆ ಡಿಕೆಶಿ ವಿಚಾರಣೆಗೆ ಸಹಕಾರ ನೀಡಿಲ್ಲ. ಅನಾರೋಗ್ಯದ ನೆಪವೊಡ್ಡಿ ಪದೇ ಪದೇ ಆಸ್ಪತ್ರೆ ಸೇರಿದ್ದರು. ಪರಿಣಾಮ ಸಂಪೂರ್ಣ ವಿಚಾರಣೆ ಸಾಧ್ಯವಾಗಿಲ್ಲ. ಹೀಗಾಗಿ ಅವರನ್ನು ಮತ್ತಷ್ಟು ದಿನ ನ್ಯಾಯಾಂಗ ಬಂಧನಕ್ಕೆ ಒಪಡಿಸಬೇಕು” ಎಂದು ಮನವಿ ಮಾಡಿಕೊಂಡರು.

ಬಂಧನದ ವೇಳೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿರುವ ನ್ಯಾಯಾಲಯ, ಮುಂದಿನ ಎರಡು ವಾರಗಳ ಕಾಲ ಡಿಕೆಶಿ ಜೈಲಿನಲ್ಲೇ ಕಳೆಯುವಂತಹ ತೀರ್ಪು ನೀಡಿದೆ.ಜಾಮೀನು ಕೋರಿ ಹೈಕೋರ್ಟ್​ಗೆ ಮನವಿ ಮಾಡಿದ್ದರೂ ಅದರ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago