Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು:2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಡಿಕೆ ಶಿವಕುಮಾರ್ ಅಭ್ಯರ್ಥಿ ಆಗುವುದೇ ಅನುಮಾನ. ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಮೈತ್ರಿ ಸರ್ಕಾರ ಹೋಗಿದ್ದು ಡಿಕೆ ಶಿವಕುಮಾನಿಂದಲೇ. ಸರ್ಕಾರದ ಪತನ ಗ್ಯಾರಂಟಿ, ಅವರು ತಿಹಾರ್ ಗೆ ಓಡುವುದು ಖಚಿತ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ. ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…