Featured

ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ : ಹೆಚ್​ಡಿ ಕುಮಾರಸ್ವಾಮಿ – Vishwanews24

ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ : ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು:2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಡಿಕೆ ಶಿವಕುಮಾರ್ ಅಭ್ಯರ್ಥಿ ಆಗುವುದೇ ಅನುಮಾನ. ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಮೈತ್ರಿ ಸರ್ಕಾರ ಹೋಗಿದ್ದು ಡಿಕೆ ಶಿವಕುಮಾನಿಂದಲೇ. ಸರ್ಕಾರದ ಪತನ ಗ್ಯಾರಂಟಿ, ಅವರು ತಿಹಾರ್ ಗೆ ಓಡುವುದು ಖಚಿತ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ. ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago