ಹೊಸದೆಹಲಿ: ಡಿಕೆ ಶಿ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ, ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.
ಸುಮಾರು ಮೂರು ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಗಾಂಧಿ ಅವರು ‘ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲ್ಲಿ ನಾವೆಲ್ಲರು ಅವರ ಜತೆ ಇದ್ದೇವೆ’ ಎಂದು ಸುರೇಶ್ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.
ದ್ವೇಷದ ರಾಜಕಾರಣಕ್ಕೆ ಡಿ.ಕೆ ಶಿವಕುಮಾರ್ ಬಲಿಯಾಗಿದ್ದಾರೆ, ಕೇಂದ್ರ ಸರ್ಕಾರ ಇಡಿ, ಸಿಬಿಐ ತನಿಖಾ ಸಂಸ್ಥೆಗಳ ಮೂಲಕ ಕೆಲವು ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಟ್ವೀಟ್ ಮಾಡಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಕೆಶಿ ಬೆನ್ನಿಗೆ ನಿಂತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…