Featured

ಡಿಕೆ ಶಿ ಜತೆಗಿನ ದಿವ್ಯಾ ಹಾಗರಗಿ ಫೋಟೋ ವೈರಲ್ ; ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ – Vishwanews24

ಡಿಕೆ ಶಿವಕುಮಾರ್ ಜತೆಗಿನ ದಿವ್ಯಾ ಹಾಗರಗಿ ಫೋಟೋ ವೈರಲ್ ; ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ – Vishwanews24

ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಇರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಸರಣಿ ಟ್ವೀಟ್ ಮೂಲಕ ಶಾಸಕ ಪ್ರಿಯಾಂಕ‌ ಖರ್ಗೆ ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆರೋಪ ನಡೆಸಿದೆ.

ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ‌ ನೋಡಿ! ಈ ಚಿತ್ರ ಏನು ಹೇಳುತ್ತದೆ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ! ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ ಎಂದು ಪ್ರಶ್ನಿಸಿದೆ.

ಪಿಎಸ್‌ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ!

ಚಿಕ್ಕಮಗಳೂರು: ಆನೆದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಸಿಡಿ ವಿವಾದ, ಹಿಜಾಬ್ ಸಂಘರ್ಷ, 40% ಪರ್ಸೆಂಟ್ ಕಮಿಷನ್, ಹರ್ಷ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್‌ಐ ನೇಮಕ ಹಗರಣ. ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ ಡಿಕೆ ಶಿವಕುಮಾರ್ ಅವರೇ.‌ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ? ಎಂದು ಟೀಕಿಸಿದೆ.

ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ. ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ ಎಂದು ಬಿಜೆಪಿ ಆರೋಪಿಸಿದೆ.

Vishwa News 24

Recent Posts

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

2 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

3 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

3 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 days ago