Featured

ಡಿಕೆ ಶಿ ತಾಯಿಯ ನೋವು ಹಾಗೂ ಕಣ್ಣೀರು ಬಿಜೆಪಿ ಕುತಂತ್ರಕ್ಕೆ ಶಾಪವಾಗಲಿದೆ ಅವರನ್ನು ಸರ್ವನಾಶ ಮಾಡಲಿದೆ : ಕುಮಾರಸ್ವಾಮಿ -Vishwanews24

ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರ ಪಿತೂರಿ ಮಾಡಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದೆ. ಈ ಸಂದರ್ಭದಲ್ಲಿ ಅವರ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿಯನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಗೌರಮ್ಮ ಅವರಿಗೆ ಸಾಂತ್ವಾನ ಹೇಳಿದ ಕುಮಾರಸ್ವಾಮಿ, ‘ಯಾವುದಕ್ಕೂ ಹೆದರಬೇಡಿ, ಈ ಎಲ್ಲ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಅವರು ಹೊರ ಬರುತ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ಎರಡು ದಿನ. ನಾವೆಲ್ಲರು ನಿಮ್ಮ ಜತೆ ಇದ್ದೇವೆ. ಹೆಚ್ಚು ಚಿಂತಿಸಬೇಡಿ. ಆರೋಗ್ಯದ ಕಡೆ ಗಮನಹರಿಸಿ ಎಂದು ಸಮಾಧಾನ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ, ಐಟಿ ಅಧಿಕಾರಿಗಳು ಬಿಜೆಪಿಯ ಕೈಕೆಳಗೆ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಗುಜರಾತ್ ರಾಜ್ಯಸಭಾ ಚುನಾವಣೆಯ ವೇಳೆ ಪಕ್ಷವನ್ನು ಉಳಿಸಿಕೊಳ್ಳುವ ಸಲುವಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿ ಶಾಸಕರನ್ನು ರಕ್ಷಣೆ ಮಾಡಿದ್ದರು. ಆ ವೇಳೆ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿದ್ದ ಸಂಗತಿ ಎಲ್ಲರಿಗೂ ತಿಳಿದಿದೆ. ಆದರೆ ಅವರು ಪಕ್ಷದ ಕಾರ್ಯವನ್ನು ಮಾಡಿದ್ದರಿಂದ ಬಿಜೆಪಿಗೆ ರಾಜ್ಯಸಭೆಯ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿತ್ತು. ಅದಕ್ಕಾಗಿ ಅವರನ್ನುನೇರವಾಗಿ ಗುರಿಯಾಗಿಸಿಕೊಂಡು ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಇಡಿ, ಐಟಿ ಸಂಸ್ಥೆಗಳನ್ನು ಉಪಯೋಗಿಸಿ ದುರ್ಬಳಕೆ ಮಾಡುತ್ತಿದೆ ಎಂದರು.

ಡಿಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸಿದರೂ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಅವಕಾಶ ಇಲ್ಲ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಆದರೂ ಅವರನ್ನು ಬಂಧಿಸಿರುವುದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಸಾಕ್ಷಿ.

ಈ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿ ಕುತಂತ್ರಕ್ಕೆ ಶಾಪವಾಗಲಿದೆ. ಅವರನ್ನು ಸರ್ವನಾಶ ಮಾಡಲಿದೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಕಾಲಚಕ್ರ ಬದಲಾಗಲಿದೆ. ನಾಳೆ ಇದೇ ಪರಿಸ್ಥಿತಿ ಬಿಜೆಪಿ ನಾಯಕರಿಗೆ ಬಂದರೆ ಆಶ್ಚರ್ಯ ಇಲ್ಲ’ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago