ಶಿವಮೊಗ್ಗ: ಸಿಬಿಐ ತನಿಖೆಗೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆಶಿ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿ ಕಾರಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ (ನ.23) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಈಶ್ವರಪ್ಪ ಮಾತನಾಡಿದ್ದಾರೆ.
ಡಿಕೆಶಿ ವಿರುದ್ಧದ ಸಿಬಿಐ ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿರೋದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ, 135 ಸೀಟ್ ಬಂದಿದೆ ಅಂತ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆ. 23 ಕೋಟಿ ಇದ್ದ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು. ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಅಲ್ಲಿ ತಿರಸ್ಕಾರವಾಯ್ತು. ಇದು ಇಡೀ ದೇಶಕ್ಕೆ ಗೊತ್ತು. ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿರುವಾಗ ಈ ರೀತಿ ಮಾಡೋದು ಸರಿಯಲ್ಲ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ, ಕೇಡಿ ಸಿದ್ದು ಅವರ ದರೋಡೆಕೋರರ ತಂಡ ದುರುಪಯೋಗ ಮಾಡಿಕೊಂಡಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಸಚಿವ ಕೆ.ಜೆ ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟು ನಂತರ ಸಚಿವ ಸಂಪುಟಕ್ಕೆ ಸೇರಿದರು. ನನ್ನ ಮೇಲೆ ಆಪಾದನೆ ಬಂತು ನಾನು ರಾಜೀನಾಮೆ ಕೊಟ್ಟೆ. ಸುಪ್ರೀಂ ಕೋರ್ಟ್ ತಜ್ಞರು ಹೇಳ್ತಿದ್ದಾರೆ ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ, ಆದ್ರೆ ಹಿಂಪಡೆಯಲು ಅನುಮತಿ ಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ. ಡಿಕೆಶಿ ಕೇಸನ್ನ ವಾಪಸ್ ಪಡೆಯಬೇಕು ಅಂತಾ ಸಚಿವ ಸಂಪುಟ ಸಭೆಗೆ ಹೋಗಿಲ್ಲ. ಇದು ದೇಶದಲ್ಲೇ ದೊಡ್ಡ ಅಪರಾಧ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…