Featured

ಡಿಕೆ ಶಿ ವಿರುದ್ಧದ​ ಸಿಬಿಐ ಕೇಸ್ ವಾಪಸ್ –  ಕಳ್ಳ ಯಾವತ್ತಿದ್ದರೂ ಕಳ್ಳನೇ : ಕೆ.ಎಸ್ ಈಶ್ವರಪ್ಪ – vishwanews24

ಡಿಕೆ ಶಿ ವಿರುದ್ಧದ​ ಸಿಬಿಐ ಕೇಸ್ ವಾಪಸ್ –  ಕಳ್ಳ ಯಾವತ್ತಿದ್ದರೂ ಕಳ್ಳನೇ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಸಿಬಿಐ ತನಿಖೆಗೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆಶಿ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಕಿಡಿ ಕಾರಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ (ನ.23) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಈಶ್ವರಪ್ಪ ಮಾತನಾಡಿದ್ದಾರೆ.

ಡಿಕೆಶಿ ವಿರುದ್ಧದ ಸಿಬಿಐ ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿರೋದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ, 135 ಸೀಟ್ ಬಂದಿದೆ ಅಂತ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆ. 23 ಕೋಟಿ ಇದ್ದ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು. ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಅಲ್ಲಿ ತಿರಸ್ಕಾರವಾಯ್ತು. ಇದು ಇಡೀ ದೇಶಕ್ಕೆ ಗೊತ್ತು. ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿರುವಾಗ ಈ ರೀತಿ ಮಾಡೋದು ಸರಿಯಲ್ಲ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ, ಕೇಡಿ ಸಿದ್ದು ಅವರ ದರೋಡೆಕೋರರ ತಂಡ ದುರುಪಯೋಗ ಮಾಡಿಕೊಂಡಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಸಚಿವ ಕೆ.ಜೆ ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟು ನಂತರ ಸಚಿವ ಸಂಪುಟಕ್ಕೆ ಸೇರಿದರು. ನನ್ನ ಮೇಲೆ ಆಪಾದನೆ ಬಂತು ನಾನು ರಾಜೀನಾಮೆ ಕೊಟ್ಟೆ. ಸುಪ್ರೀಂ ಕೋರ್ಟ್ ತಜ್ಞರು ಹೇಳ್ತಿದ್ದಾರೆ ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ, ಆದ್ರೆ ಹಿಂಪಡೆಯಲು ಅನುಮತಿ ಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ. ಡಿಕೆಶಿ ಕೇಸನ್ನ ವಾಪಸ್ ಪಡೆಯಬೇಕು ಅಂತಾ ಸಚಿವ ಸಂಪುಟ ಸಭೆಗೆ ಹೋಗಿಲ್ಲ. ಇದು ದೇಶದಲ್ಲೇ ದೊಡ್ಡ ಅಪರಾಧ ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago