ಬೆಂಗಳೂರು: ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ, ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರ್ತಾರೆ. ನಮ್ಮ ಹಣೆಬರಹದಲ್ಲಿ ಬರೆದಿರಬೇಕು. ನೀನು ಸಿಎಂ, ಶಾಸಕ ಆಗಬೇಕೆಂದು ಇರಬೇಕು ಎಂದು ನುಡಿದರು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…