Featured

ಡಿಕೆ ಶಿ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ : ಡಿ.ಕೆ ಸುರೇಶ್‌  – vishwanews24

ಡಿಕೆ ಶಿ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ, ಅವರ ಶ್ರಮಕ್ಕೆ ಫಲ ಸಿಗುತ್ತೆ  : ಡಿ.ಕೆ ಸುರೇಶ್‌

ಬೆಂಗಳೂರು: ಡಿಕೆ ಶಿವಕುಮಾರ್‌  ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌  ಹೇಳಿದರು.

ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ  ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ, ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರ್ತಾರೆ. ನಮ್ಮ ಹಣೆಬರಹದಲ್ಲಿ ಬರೆದಿರಬೇಕು. ನೀನು ಸಿಎಂ, ಶಾಸಕ ಆಗಬೇಕೆಂದು ಇರಬೇಕು ಎಂದು ನುಡಿದರು

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

17 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

18 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

18 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

19 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

20 hours ago