ಬೆಂಗಳೂರು: ಅಕ್ರಮ ಹಣ ಸಂಗ್ರಹ ಮತ್ತು ವಿನಿಮಯ ಹಾಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಡಿ ಕೆ ಸಹೋದರರಿಗೆ ಇನ್ನಷ್ಟು ಕಗ್ಗಂಟಾಗುವ ಲಕ್ಷಣ ಕಾಣುತ್ತಿದೆ. ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಿ ಕೆ ಶಿವಕುಮಾರ್, ಅವರ ಸೋದರ ಡಿ ಕೆ ಸುರೇಶ್ ಮತ್ತು ಅವರ ಮಾಜಿ ಆಪ್ತ ಸಹಾಯಕರು ಅಮಾನ್ಯತೆಗೊಂಡ ನೋಟುಗಳನ್ನು ಅಕ್ರಮವಾಗಿ ವಿನಿಮಯ ಮಾಡಿದ ಸಂಬಂಧ ಇದೀಗ ಬಂಧನ ಭೀತಿ ಎದುರಿಸುತ್ತಿದ್ದಾರೆ.ನಿನ್ನೆ ಸಿಬಿಐ ವಿಶೇಷ ನ್ಯಾಯಾಲಯ ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನೆಲಮಂಗಲ ತಾಲ್ಲೂಕಿನ ಟಿ ಬೇಗೂರಿನ ಬಿ ಪದ್ಮನಾಭಯ್ಯ ಎಂಬುವವರು ಆರೋಪಿಗಳಾಗಿದ್ದು ಅವರು ಡಿ ಕೆ ಸುರೇಶ್ ಅವರ ಖಾಸಗಿ ಸಹಾಯಕರಾಗಿದ್ದರು.ರಾಮನಗರ ತಾಲ್ಲೂಕಿನ ವಿಜಯನಗರದ ಎಸ್ ಶೇಷಗಿರಿ ಎಂಬ ನಿವೃತ್ತ ಅಧಿಕಾರಿ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ಖಾಸಗಿ ಸಹಾಯಕರಾಗಿದ್ದರು. ಇವರು ಮತ್ತೊಬ್ಬ ಆರೋಪಿಯಾಗಿದ್ದಾರೆ.ಕೇಂದ್ರ ಸರ್ಕಾರ 500 ಮತ್ತು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಪಡಿಸಿದ ನಂತರದ ನವೆಂಬರ್ 2016ರ ಕೇಸು ಇದಾಗಿದೆ. ಕಳೆದ ಮೇ 31ರಂದು ಸಿಬಿಐ, ಸುರೇಶ್ ಅವರ ಆಪ್ತ ಸಹಾಯಕನ ಮನೆ ಮೇಲೆ ದಾಳಿ ನಡೆಸಿತ್ತು. ಸುಮಾರು 10 ಲಕ್ಷಕ್ಕೂ ಅಧಿಕ ಚಲಾವಣೆ ರದ್ದುಗೊಂಡ ನೋಟುಗಳ ಅಕ್ರಮ ವಿನಿಮಯ ಮಾಡಿದ್ದರ ಆರೋಪದ ಬಗ್ಗೆ ಬೆಂಗಳೂರು, ಕನಕಪುರ ಮತ್ತು ರಾಮನಗರದ 5 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.ಈ ದಾಳಿ ನಡೆದ ನಂತರ ಸಿಬಿಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಡಿ ಕೆ ಸಹೋದರರು ಆರೋಪಿಸಿದ್ದರು. ಕೇಂದ್ರ ಸರ್ಕಾರದ ತಂತ್ರಗಳು ಮತ್ತು ತೋಳ್ಬಲ ಪ್ರದರ್ಶನ ಪ್ರಯೋಜನಕ್ಕೆ ಬರುವುದಿಲ್ಲ. ನಾವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…