ಬೆಂಗಳೂರು: ‘ನಗರದಾದ್ಯಂತ ನಿತ್ಯ ಒಂದು ಗಂಟೆ ಉಚಿತವಾಗಿ ವೈ–ಫೈ ಸೇವೆ ಒದಗಿಸಲಾಗುತ್ತದೆ. ಎಸಿಟಿ ಕಂಪನಿಯು ಯಾವುದೇ ಶುಲ್ಕ ಪಡೆಯದೆಯೇ ಈ ಸೇವೆಯನ್ನು ಒದಗಿಸಲು ಮುಂದೆ ಬಂದಿದೆ’ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ತಿಳಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿಜಿಟಲ್ ಕರ್ನಾಟಕದ ಮೂಲಕ ಡಿಜಿಟಲ್ ಇಂಡಿಯಾದ ಕನಸು ಸಾಕಾರಗೊಳಿಸುವುದು ನಮ್ಮ ಗುರಿ. ಇದನ್ನು ಸಾಕಾರಗೊಳಿಸುವ ನಿಟ್ಟಿನ ಮೊದಲ ಹೆಜ್ಜೆಯಾಗಿ ನಗರದಲ್ಲಿ ಕ್ಷಿಪ್ರ ವೇಗದ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಎಸಿಟಿ ಸಂಸ್ಥೆಯು ವೈ–ಫೈ ಗೋಪುರಗಳ ಜೊತೆ ಸಿಸಿಟಿವಿ ಕ್ಯಾಮರಾಗಳನ್ನೂ ಅಳವಡಿಸಲಿದೆ. ಈ ಯೋಜನೆಗೆ ಸಂಸ್ಥೆ ₹ 100 ಕೋಟಿ ವೆಚ್ಚಮಾಡಲಿದೆ. ಯೋಜನೆ ಪೂರ್ಣಗೊಳ್ಳಲು 9 ತಿಂಗಳು ಬೇಕು’ ಎಂದು ಸಚಿವರು ವಿವರಿಸಿದರು.
ಎಸಿಟಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲ ಮಲ್ಲಾಡಿ, ‘ಬೆಂಗಳೂರನ್ನು ಡಿಜಿಟಲ್ ಸಿಟಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೊರೆತಿರುವ ಈ ಅವಕಾಶಕ್ಕೆ ಧನ್ಯವಾದ ಹೇಳುತ್ತೇವೆ. ಈ ಮೂಲಕ ನಗರದ ಜನ ಜೀವನದಲ್ಲಿ ಬದಲಾವಣೆ ತರುವ ಉದ್ದೇಶ ನಮ್ಮದು. ವೈ–ಫೈ ಗೋಪುರಗಳ ನಿರ್ವಹಣೆಗೆ ಬಿಬಿಎಂಪಿ ವತಿಯಿಂದ ವಿದ್ಯುತ್‌ಪೂರೈಸಬೇಕು. ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ’ ಎಂದುತಿಳಿಸಿದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…