ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ ಎಂದಿದ್ದಾರೆ. ವೈರಲ್ ಆಗಿರುವ ಆಡಿಯೋ ಸಂಭಾಷಣೆ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನು ಕೂಡ ಅಧಿಕೃತವಾಗಿ ದೃಢಪಟ್ಟಿಲ್ಲ. ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕರೊಬ್ಬರ ಹೆಸರನ್ನು ಒಳಗೊಂಡಿರುವ ಇಂತಹ ಸೂಕ್ಷ್ಮ ವಿಚಾರದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…