ಜೈಪುರ: ಜೈಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿದ್ದಾರೆ.
ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಲಿಯಾ ರಾತ್ರಿ 11:30 ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರ ವಾಹನವು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ವಾಹನವು ವಿಭಜಕಕ್ಕೆ ಡಿಕ್ಕಿ ಹೊಡೆದು ಎಡಭಾಗಕ್ಕೆ ಪಲ್ಟಿಯಾಗಿರುವುದನ್ನು ಕಾಣಬಹುದು.
ಸ್ಥಳೀಯ ನಿವಾಸಿಗಳು ವಾಹನವನ್ನು ಸರಿಪಡಿಸಿ ಕಾಲಿಯಾಳನ್ನು ರಕ್ಷಿಸಿದರು. ನಂತರ ನಟಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ತಲೆಗೆ ತೀವ್ರ ಪೆಟ್ಟಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಕಾಲಿಯಾ ‘ಕ್ರೈಮ್ ನೆಕ್ಸ್ಟ್ ಡೋರ್’ ವೆಬ್ ಸರಣಿಯಲ್ಲಿ ಕೆಲಸ ಮಾಡಿದ್ದರು. ಸುದ್ದಿ ವಾಹಿನಿಯ ನಿರೂಪಕಿಯಾಗಿ ಸೇವೆ ಸಲ್ಲಿಸಿದ್ದರು. ಹಲವಾರು ರಾಜಸ್ಥಾನಿ ಹಾಡುಗಳಲ್ಲಿ ಪ್ರಮುಖ ಮಹಿಳಾ ಪಾತ್ರವನ್ನು ನಿರ್ವಹಿಸಿದ್ದರು. ಇತ್ತೀಚೆಗೆ, ಮಾಡೆಲಿಂಗ್ನಲ್ಲಿ ತೊಡಗಿಸಿಕೊಂಡಿದ್ದರು.
ಕಾಲಿಯಾ ಅವರ ತಂದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಖಾಸಗಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…
ಉಡುಪಿ: ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…
ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…
ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…
ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…