Featured

ಡಿವೈಡರ್ ಗಳಲ್ಲಿ ಜಾಹೀರಾತು ಫಲಕ ಹಾಕುವಂತಿಲ್ಲ,ಅನಧಿಕೃತ ಬ್ಯಾನರ್ ಗಳನ್ನು ತಕ್ಷಣ ತೆರವುಗೊಳಿಸಿ : ಉಡುಪಿ ಜಿಲ್ಲಾಧಿಕಾರಿ – Vishwanews24

ಉಡುಪಿ :  ಫ್ಲೆಕ್ಸ್ ಬ್ಯಾನರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಫ್ಲೆಕ್ಸ್ ಬ್ಯಾನರ್‍ಗಳು ಮತ್ತು ಅನಧೀಕೃತ ಬ್ಯಾನರ್‍ಗಳು ಕಂಡುಬಂದಿದ್ದು, ತಕ್ಷಣ ತೆರವುಗೊಳಿಸಬೇಕೆಂದು ಆದೇಶಿಸಲಾಗಿದೆ.

ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ್ದಲ್ಲಿ 1000 ರೂ ಹಾಗೂ ಎರಡನೇ ಬಾರಿ ನಿಯಮ ಉಲ್ಲಂಘಿಸಿದ್ದಲ್ಲಿ 2000 ರೂ. ದಂಡ ವಿಧಿಸಲಾಗುವುದು. ಹಾಗೂ ಮೂರನೇ ಬಾರಿ ಪ್ರಕರಣ ದಾಖಲಿಸುವುದು ಅಥವಾ ಅಂಗಡಿ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ. ಬದಲಿ ವ್ಯವಸ್ಥೆಯಾಗಿ ಬಟ್ಟೆಯಿಂದ ಅಥವಾ ಪೇಪರ್ ನಿಂದ ತಯಾರಿಸುವ ಬ್ಯಾನರ್, ತೋರಣ ಬಂಟಿಗ್ಸ್, ಬಾವುಟ ಇವುಗಳನ್ನು ಮಾತ್ರ ಉಪಯೋಗಿಸಬೇಕು. ಈ ಕಟ್ಟುನಿಟ್ಟಿನ ಕ್ರಮವನ್ನು ಉಲ್ಲಂಘಿಸಿದ್ದಲ್ಲಿ ಮುಖ್ಯಾಧಿಕಾರಿ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಕಡ್ಡಾಯವಾಗಿ ಬಟ್ಟೆಯ ಬ್ಯಾನರ್‍ಗಳನ್ನು ಬಳಸಬೇಕು. ಅವಧಿ ಮುಗಿದ ತಕ್ಷಣ ಬ್ಯಾನರ್ ತೆರವುಗೊಳಿಸಬೇಕು. ಬ್ಯಾನರ್ ಅಳವಡಿಸುವ ದಿನಾಂಕ, ಸಮಯದ ವಿವರ ಸಂಬಂಧಪಟ್ಟ ಠಾಣೆಗೆ ತಿಳಿಸಬೇಕು. ಬ್ಯಾನರ್ ಅಳವಡಿಸುವ ಸಮಯದಲ್ಲಿ ಭದ್ರತೆಗೆ ಕಾವಲುಗಾರನ ನಿಯೋಜನೆ, ಸಿ.ಸಿ.ಟಿ.ವಿ ಕ್ಯಾಮರ ಅಳವಡಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಅಳವಡಿಸುವುದು ಕಡ್ಡಾಯವಾಗಿರಬೇಕು. ಅಪಾಯಕಾರಿ ತಿರುವುಗಳಲ್ಲಿ ಬ್ಯಾನರ್‍ಗಳನ್ನು ಕಡ್ಡಾಯವಾಗಿ ಹಾಕುವಂತಿಲ್ಲ. ಬ್ಯಾನರ್‍ಗಳಿಗೆ ಕಡ್ಡಾಯವಾಗಿ ಆದೇಶ ಸಂಖ್ಯೆ, ದಿನಾಂಕ, ಬ್ಯಾನರ್ ಅಳವಡಿಕೆ ಅವಧಿಯನ್ನು ನಮೂದಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ, ಡಿವೈಡರ್‍ಗಳಲ್ಲಿ ಜಾಹೀರಾತು ಫಲಕ ಹಾಕುವಂತಿಲ್ಲ.

ಹೊರ ರಾಜ್ಯಗಳಿಂದ ನಿರಂತರವಾಗಿ ರಾಜ್ಯಕ್ಕೆ ಬರುತ್ತಿರುವ ನಿಷೇಧಿತ ಪ್ಲಾಸ್ಟಿಕ್‍ನ್ನು ರಾಜ್ಯದ ಗಡಿಭಾಗದ ಚೆಕ್ ಪೋಸ್ಟ್‍ಗಳಲ್ಲಿಯೇ ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳಾದ ಸಾರಿಗೆ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಅನುಷ್ಟಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಮಟ್ಟದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮಾಡುವ ಘಟಕಗಳನ್ನು ಮುಚ್ಚುವ ಆದೇಶ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕ್ರಮ ಕೈಗೊಳ್ಳಬೇಕು. ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಅಂಗಡಿ, ಮುಂಗಟ್ಟು ಮತ್ತು ಮಾಲ್‍ಗಳ ಮೇಲೆ ದಾಳಿ ನಡೆಸಿ, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಬೇಕು ಮತ್ತು ನಿಯಮಾನುಸಾರ ಉಲ್ಲಂಘಿತರಿಗೆ ದಂಡ ವಿಧಿಸಬೇಕು.

ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮತ್ತು ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡುವಂತೆ ಹಾಗೂ ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago