ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.
ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು. ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಇದನ್ನೂ ಓದಿ:
ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…