ರಾಜ್ಯ ನ್ಯೂಸ್

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಅಸಮಾಧಾನ ಡಿ.ಕೆ.ಬ್ರದರ್ಸ್.!!

ಕರ್ನಾಟಕದಲ್ಲಿ ಈಗಾಗಲೇ 222 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಮೇ ಹದಿನೈದು ರಂದು ಪ್ರಕಟವಾದ ಈ ಫಲಿತಾಂಶದಲ್ಲಿ ಅತಂತ್ರ ಫಲಿತಾಂಶ ಬಂದು ರಾಜ್ಯ ಕಳೆದೊಂದು ವಾರದಿಂದ ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಗಿತ್ತು. ಇಂದು ಅದಕ್ಕೆಲ್ಲ ತೆರೆ ಬೀಳುವ ಲಕ್ಷಣಗಳು ಕಂಡು ಬರುತ್ತಿದ್ದು ಇಂದು ವಿಧಾನ ಸೌಧದ ಮುಂಭಾಗದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಪರಮೇಶ್ವರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಭಾರೀ ಲಾಭಿ ನಡೆಸಿದ್ದು ಈಗ ಈ ಹುದ್ದೆಗೆ ಪರಮೇಶ್ವರ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ಬರಲು ಮೂಲ ಕಾರಣರಾಗಿರುವ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು ಆದರೆ ಆ ಸ್ಥಾನ ಈಗ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪಾಲಾಗಿರುವುದರಿಂದ ಡಿಕೆಶಿ ಸಿಡಿದೆದ್ದಿದ್ದಾರೆ.

ಇಂದು ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿರುವ ಡಿ.ಕೆ.ಶಿವಕುಮಾರ್ ಅವರು ಪರಮೇಶ್ವರ್ ರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿದ್ದಕ್ಕೆ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಪರಮೇಶ್ವರ್ ಅವರು ಕಳೆದ 8 ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಕುರ್ಚಿ ಬಿಡುತ್ತೇನೆ ಎಂದು ಆಗಾಗ ಹೇಳುತ್ತಿದ್ದರೂ ಸಹ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನಾನು ಫುಟ್ಬಾಲ್ ಆಡಲ್ಲ, ಚೆಸ್ ಆಡಿ ಚೆಕ್ ಕೊಡುವವನು ನೋಡೋಣ ಯಾವ ಸ್ಥಾನ ಸಿಗುತ್ತೆ ಎಂದು. ಎಲ್ಲದ್ದಕ್ಕೂ ಮಹೂರ್ತ, ಕಾಲ ಎಲ್ಲಾ ನೋಡಕೊಂಡಿರಲು ನಾನೇನು ಸನ್ಯಾಸಿಯಲ್ಲ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ..

ಇನ್ನು ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಅವರ ತಮ್ಮ ಹಾಗೂ ಸಂಸದರಾದ ಡಿ.ಕೆ.ಸುರೇಶ್ ಅವರೂ ಸಹ ಸಿಡಿದೆದ್ದಿದ್ದು ಕಾಂಗ್ರೆಸ್ ಶಾಸಕರಿದ್ದ ಹೋಟೆಲ್ ನಿಂದ ಅವರ ಬೆಂಬಲಿಗರೊಂದಿಗೆ ಚೆಕ್ ಔಟ್ ಆಗಿದ್ದಾರೆ. ಅಲ್ಲಿದ್ದ ಶಾಸಕರ ಸಮ್ಮುಖದಲ್ಲಿಯೇ ವಾಗ್ದಾಳಿ ನಡೆಸಿರುವ ಡಿ.ಕೆ.ಸುರೇಶ್ ಅವರು ಕೆಲಸ ಮಾಡಲು ಮಾತ್ರ ನಾವು ಬೇಕು ಅಧಿಕಾರ ಮಾತ್ರ ಬೇರೆಯವರಿಗಾ ಎಂದು ಗರಂ ಆಗಿ ಹೇಳಿದ್ದು ಇದು ಕಾಂಗ್ರೆಸ್ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ.

ಕಾಂಗ್ರೆಸ್ ವಿರುದ್ದ ಸಿಡಿದೆದ್ದಿರುವ ಡಿ.ಕೆ ಸುರೇಶ್ ಅವರನ್ನು ಸಮಾಧಾನ ಪಡಿಸಲು ಕೆಪಿಸಿಸಿ ಕಾರ್ಯದರ್ಶಿ ಯಶೋಮತಿ ಠಾಕೂರ್ ಅವರು ಮುಂದಾದರೂ ಸಹ ಅದಕ್ಕೆಲ್ಲಾ ಕ್ಯಾರೇ ಎನ್ನದೇ ಏನು ಬೇಕಾದರೂ ಮಾಡಿಕೊಳ್ಳಿ ಎಂದು ಹೋಟೆಲ್ ನಿಂದ ತಮ್ಮ ಬೆಂಬಲಿಗರೊಂದಿಗೆ ಹೊರನಡೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಡಿ.ಕೆ ಸುರೇಶ್ ಹಾಗೂ ಅವರ ತಂಡ ಕಳೆದ 7 ದಿನಗಳಿಂದ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡುವುದರಿಂದ ಹಿಡಿದು ಎಲ್ಲವನ್ನೂ ನೋಡಿಕೊಂಡಿತ್ತು. ಡಿ.ಕೆ.ಬ್ರದರ್ಸ್ ಈ ಹಿಂದೆ ಗುಜರಾತ್ ಶಾಸಕರನ್ನು ಕರ್ನಾಟಕಕ್ಕೆ ಕರೆತಂದಾಗ ಆ ಜವಾಬ್ದಾರಿಯನ್ನು ಸಹ ವಹಿಸಿಕೊಂಡು ರಾಷ್ಟ್ರದ ಗಮನ ಸೆಳೆದಿದ್ದರು.

ಇದಕ್ಕೂ ಮೊದಲು ಲಿಂಗಾಯತ ಸಮುದಾಯದ ಶಾಸಕರಿಂದ ಶಾಮನೂರು ಶಿವಶಂಕರಪ್ಪ ಅಥವಾ ಎಚ್ ಕೆ ಪಾಟೀಲ್ ಅವರನ್ನು, ಪ್ರತ್ಯೇಕ ಲಿಂಗಾಯತ ಬಣದ ಶಾಸಕರಿಂದ ಎಂಬಿ ಪಾಟೀಲ್ ಅವರನ್ನು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಕೋಟಾದಲ್ಲಿ ಉಪ ಮುಖ್ಯಮಂತ್ರಿ ಮಾಡಬೇಕು ಎಂಬ ಕೂಗೆದ್ದಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಈ ಬೇಡಿಕೆಯನ್ನು ಒಪ್ಪದ ಕಾರಣ ಲಿಂಗಾಯತ ಸಮುದಾಯ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿತ್ತು

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

18 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

19 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

19 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

19 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

21 hours ago