ಮಂಗಳೂರು: ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್ನಲ್ಲಿ ಮಂಗಳೂರು ಪುರಭವನದಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ.
ನಗರದ ಖಾಸಗಿ ಹೋಟೆಲ್ನ ಸಭಾಂಗಣದಲ್ಲಿನಡೆದ ತುಳು ಪರಿಷತ್ ಕೇಂದ್ರೀಯ ಸಮಿತಿ ಸಭೆಯಲ್ಲಿಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ ಸ್ವರ್ಣ ಸುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ತುಳು ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ , ‘ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ, ಕಾರ್ಯಕ್ರಮಗಳನ್ನು ನಡೆಸಿಕೊಡುವರು’ ಎಂದು ವಿವರ ನೀಡಿದರು.
ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಮಾತನಾಡಿ, ‘ಈ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಬದುಕಿನ ಸಂಶೋಧನೆ, ದಾಖಲೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ’ ಎಂದು ತಿಳಿಸಿದರು.
ವಿದ್ಯಾರ್ಥಿ ತುಳು ಸಮ್ಮೇಳನದ ವಿವಿಧ ಕಾರ್ಯಕ್ರಮ ಸ್ವರೂಪಗಳ ಬಗ್ಗೆ ಸಭೆಯಲ್ಲಿಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ತುಳು ಪರಿಷತ್ ಸದಸ್ಯರುಗಳಾದ ಸುಭಾಶ್ಚಂದ್ರ ಕಣ್ವತೀರ್ಥ , ಗೋಪಾಲ್ ಅಂಚನ್ , ಅಕ್ಷತಾ ಶೆಟ್ಟಿ , ಶೋಭಾ ಶೆಟ್ಟಿ , ರಮೇಶ್ ಮಂಚಕಲ್, ಬಾಬು ಪಾಂಗಾಳ, ಇಸ್ಮಾಯಿಲ್ ಪೆರಿಂಜೆ, ಸುದರ್ಶನ್, ಅಮಿತಾ ಆಳ್ವಾ, ಮಣಿ ರೈ, ಅವಿನಾಶ್, ಹರೀಶ್, ವಸಂತ್, ದಿನೇಶ್, ಜಯಲಕ್ಷ್ಮೀ ಶೆಟ್ಟಿ, ,ಭರತೇಶ್ ಮೊದಲಾದವರು ಭಾಗವಹಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…