ಹುಬ್ಬಳ್ಳಿ: ಕೋವಿಡ್ ಅಲೆ ಎದುರಿಸುವ ಕಾರ್ಯವು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮಥ್ರ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿದೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿದೆ. ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದಕ್ಕಾಗಿ ಹೆಮ್ಮೆ ಪಡೋಣ ಆದರೆ ವಿಶ್ರಮಿಸುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಆವರಣದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ 100 ಕೋಟಿ ಲಸಿಕಾಕರಣ ಭಾರತ ದೇಶದ ಪಯಣ ಕಾರ್ಯಕ್ರಮ ಹಾಗೂ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಸಮರ್ಪಣೆ ಮಾಡಿ ಮಾತನಾಡಿದ ಅವರು, ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು (Convert calamity into opportunity) ಎಂಬ ಮಾತನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ನಿಜ ಎಂದು ಮಾಡಿ ತೋರಿಸಿದೆ. ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್, ಮಾಸ್ಕ್, ಕೈಗವಸುಗಳಿರಲಿಲ್ಲ. ಇಂದು ಈ ಉತ್ಪನ್ನಗಳನ್ನಷ್ಟೇ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ ಎಂದರು.
ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ. ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತಾ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ ನೂರು ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದರ ಹಿಂದೆ ವೈದ್ಯರು, ಅರೆವೈದ್ಯಕೀಯ, ಆರೋಗ್ಯ ಕಾರ್ಯಕರ್ತರ,ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಶ್ರಮವಿದೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಅಭಿನಂದಿಸುತ್ತೇನೆ. ಇನ್ನು 3-4 ತಿಂಗಳ ಅವಧಿಯಲ್ಲಿ ಮತ್ತೆ ನೂರು ಕೋಟಿ ಲಸಿಕೆ ನೀಡುವ ಗುರಿ ಇದೆ. ರಾಜ್ಯದಲ್ಲಿಯೂ ಡಿಸೆಂಬರ್ ಅಂತ್ಯದ ವೇಳೆಗೆ ಶೇ.90 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.70 ರಷ್ಟು ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.
ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುವಾಗ ಲಸಿಕಾಕರಣವೇ ಮದ್ದು ಎಂಬುದು ನೂರು ವರ್ಷಗಳ ಹಿಂದೆಯೇ ಸಾಬೀತಾಗಿದೆ. ಪೆನ್ಸಿಲಿನ್‍ನಿಂದ ಪೋಲಿಯೋವರೆಗೆ ಅನೇಕ ಲಸಿಕೆಗಳು ಮನುಷ್ಯನಿಗೆ ಬಾಹ್ಯವಾಗಿ ಶಕ್ತಿ ತುಂಬಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗಿದೆ. ವೈರಾಣುಗಳಿಗೆ ಭೌಗೋಳಿಕ ಮತ್ತು ಖಗೋಳಿಯ ಗಡಿಗಳು ಇರುವುದಿಲ್ಲ. ಅಣುಸ್ಫೋಟದಂತೆ ಅದು ವೇಗವಾಗಿ ಹರಡಬಲ್ಲದು. ವೈರಾಣು ರೂಪಾಂತರಗೊಳ್ಳುವುದು ನಮ್ಮ ಮುಂದಿರುವ ಸವಾಲಾಗಿದೆ. ವಿಜ್ಞಾನಿಗಳು ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ಕಾರ್ಯತತ್ಪರರಾಗಿದ್ದಾರೆ. ಕೋವಿಡ್‍ನಿಂದಾಗಿ ದೇಶ ಮಾತ್ರವಲ್ಲ, ಇಡೀ ವಿಶ್ವ ಸಮುದಾಯದ ಒಟ್ಟು ಆರೋಗ್ಯ ಸದೃಢವಾಗಿರಬೇಕು ಎಂಬ ಪಾಠ ಕಲಿತಿದ್ದೇವೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿದೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿ ಒಂದೇ ವರ್ಷದಲ್ಲಿ 1 ಲಕ್ಷ 25 ಸಾವಿರ ಹಾಸಿಗೆಗಳ ಸಾಮರ್ಥ್ಯ ಹೆಚ್ಚಾಗಿದೆ. ನಾಲ್ಕು ಸಾವಿರ ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಕೂಡ ಆಕ್ಸಿಜನ್ ಬೆಡ್‍ಗಳ ಸೌಲಭ್ಯ ಸ್ಥಾಪನೆಯಾಗಿವೆ. ವೈದ್ಯಕೀಯ ಆಮ್ಲಜನಕ ಉತ್ಪಾದನೆ ಹಾಗೂ ಪೂರೈಕೆ ಸಮರ್ಪಕ ಮತ್ತು ಸಶಕ್ತವಾಗಿದೆ ಎಂದು ವಿವರಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…