ಡಿಸೆಂಬರ್ 25 ರಿಂದ ಪೊಲಿಪು ವಿದ್ಯಾ ಸಂಸ್ಥೆಗಳ ಶತ.ವಜ್ರ,ಸ್ವರ್ಣ ಸಂಭ್ರಮ.
ಕಾಪು: ಶಿಕ್ಷಣ ಕ್ರಾಂತಿಗೆ ಮಹತ್ತರದ ಕೊಡುಗೆ ನೀಡಿರುವ ಕಾಪು ಪೊಲಿಪು ಸರಕಾರಿ ಪ್ರಾಥಮಿಕ, ಪ್ರೌಡಶಾಲೆ, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜುಗಳು ಈ ವರ್ಷ ಕ್ರಮವಾಗಿ ನೂರು,ಆರುಚತ್ತು ಮತ್ತು ಐವತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಆ ಪ್ರಯುಕ್ತ ಡಿಸೆಂಬರ್ 25 ರಿಂದ 27 ರ ವರೆಗೆ ಕ್ರಮವಾಗಿ ಶತ ವಜ್ರ ಸ್ವರ್ಣ ಮಹೋತ್ಸವ ಕಾರ್ಯಕ್ರಮಗಲು ಜರಗಲಿವೆ.
ಈ ಯಶಸ್ವಿಯನ್ನು ನೆನಪನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಶತ ವಜ್ರ ಸ್ವರ್ಣ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಗೌರವಾದ್ಯಕ್ಷ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂಭ್ರಮ ಕೇವಲ ಆಚರಣೆಗೆ ಸೀಮಿತಗೊಳಿಸದೆ ಈ ಶಿಕ್ಷಣ ಸಂಸ್ಥೆಗಲ ಉಳಿವಿಗಾಗಿ ಹತ್ತಾರು ಶಾಶ್ವತ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಮೂರುದಿನಗಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕ್ಷಣ ಸಚಿವರು, ವಿಧಾನ ಸಭೆ ಸ್ಪೀಕರ್, ಸೇರಿದಂತೆ ಹತ್ತಾರು ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಧ್ಯಕ್ಷ ಸರ್ವೊತ್ತಮ ಕುಂದರ್,ಗೌರವ ಪ್ರಧಾನ ಕಾರ್ಯದರ್ಶಿ ಕಿರಣ್ ಆಳ್ವಾ.ಉಪಾಧ್ಯಕ್ಷ ಪ್ರವೀಣ್ ಡಿ ಕುಂದರ್,ರತ್ನಾಕರ್ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…