Featured

ಡಿಸೆಂಬರ್ 3 ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಡುಪಿಗೆ -Vishwanews24

ಡಿಸೆಂಬರ್ 3 ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ -Vishwanews24

ಉಡುಪಿ: ಕರ್ನಾಟಕ ಸರಕಾರದ ಗೃಹ ಸಚಿವರೂ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಡಿಸೆಂಬರ್ 3ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಗುರುವಾರ ಬೆಳಿಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸುವ ಅವರು ಉಡುಪಿಯಲ್ಲಿ ಕನಕದಾಸ ಜಯಂತಿ ಆಚರಣೆಯಲ್ಲಿ ಭಾಗವಹಿಸಲಿದ್ದು, ಬಳಿಕ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ 11 ಗಂಟೆಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಿರುವ ದ್ರವ ರೂಪದ ಅಮ್ಮಜನಕ ನೂತನ ಘಟಕ ಉದ್ಘಾಟಿಸಿ ಬಳಿಕ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಿದ್ದು ತದನಂತರ ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಮಣಿಪಾಲದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಮಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಬಳಿ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ತದನಂತರ ಸಂಜೆ 4.45 ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನಿಟ್ಟೂರು ಇದರ ಕಟ್ಟಡ ಉದ್ಘಾಟನೆ ನಡೆಸಿ ಸಂಜೆ 5.30 ಕ್ಕೆ ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

48 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

24 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

24 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago