ಹೊಸ ದಿಲ್ಲಿ: ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿದ್ದು, ಈ ಬಂದ್ ಕರೆಗೆ ತಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತು ಹೊಸ ದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿವೆ. ನಾವು ಈ ಬಂದ್ಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ. ರೈತರ ಪರವಾಗ ನಾವು ಧರಣಿ ಸತ್ಯಾಗ್ರಹ ನಡೆಸೋದಾಗಿ ಹೇಳಿದ್ದಾರೆ. ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ಧಾರೆ.
ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡಾ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಬಂದ್ಗೆ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ರೈತರ ಪರವಾಗಿದ್ದು, ರೈತರಿಗೆ ರಾಹುಲ್ ತಮ್ಮ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡಾ ನಮ್ಮ ಪಕ್ಷದ ಕಚೇರಿ ಬಳಿ ಪ್ರತಿಭಟನೆಗಳನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.
ಭಾರತೀಯ ಪ್ರವಾಸಿ ಸಾರಿಗೆ ಸಂಘ ಕೂಡಾ ಡಿಸೆಂಬರ್ 8ರ ಭಾರತ್ ಬಂದ್ ಕರೆಗೆ ತಮ್ಮ ಬೆಂಬಲ ಸೂಚಿಸಿದೆ. ದೇಶದೆಲ್ಲೆಯ 51 ಸಾರಿಗೆ ಸಂಘಗಳು ಬಂದ್ಗೆ ಬೆಂಬಲ ಸೂಚಿಸಿದ್ದು, ಪ್ರತಿಭಟನೆಗೆ ತೆರಳುವ ರೈತರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸುವ ಕೆಲಸ ಮಾಡೋದಾಗಿ ಸಂಘಟನೆ ಘೋಷಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…