Featured

ಡಿಸೆಂಬರ್ 8 ಭಾರತ್ ಬಂದ್ ‌: ರೈತ ಸಂಘಟನೆಗಳ ಕರೆಗೆ ಕಾಂಗ್ರೆಸ್ ಬೆಂಬಲ -Vishwanews24

ಡಿಸೆಂಬರ್ 8 ಭಾರತ್ ಬಂದ್ ‌: ರೈತ ಸಂಘಟನೆಗಳ ಕರೆಗೆ ಕಾಂಗ್ರೆಸ್ ಬೆಂಬಲ

ಹೊಸ ದಿಲ್ಲಿ: ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್‌ ಬಂದ್‌ಗೆ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿದ್ದು, ಈ ಬಂದ್‌ ಕರೆಗೆ ತಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಕುರಿತು ಹೊಸ ದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿವೆ. ನಾವು ಈ ಬಂದ್‌ಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ. ರೈತರ ಪರವಾಗ ನಾವು ಧರಣಿ ಸತ್ಯಾಗ್ರಹ ನಡೆಸೋದಾಗಿ ಹೇಳಿದ್ದಾರೆ. ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ಧಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡಾ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಬಂದ್‌ಗೆ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ರೈತರ ಪರವಾಗಿದ್ದು, ರೈತರಿಗೆ ರಾಹುಲ್ ತಮ್ಮ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡಾ ನಮ್ಮ ಪಕ್ಷದ ಕಚೇರಿ ಬಳಿ ಪ್ರತಿಭಟನೆಗಳನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಭಾರತೀಯ ಪ್ರವಾಸಿ ಸಾರಿಗೆ ಸಂಘ ಕೂಡಾ ಡಿಸೆಂಬರ್ 8ರ ಭಾರತ್ ಬಂದ್‌ ಕರೆಗೆ ತಮ್ಮ ಬೆಂಬಲ ಸೂಚಿಸಿದೆ. ದೇಶದೆಲ್ಲೆಯ 51 ಸಾರಿಗೆ ಸಂಘಗಳು ಬಂದ್‌ಗೆ ಬೆಂಬಲ ಸೂಚಿಸಿದ್ದು, ಪ್ರತಿಭಟನೆಗೆ ತೆರಳುವ ರೈತರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸುವ ಕೆಲಸ ಮಾಡೋದಾಗಿ ಸಂಘಟನೆ ಘೋಷಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago