Featured

ಡಿ.ಕೆ.ಶಿವಕುಮಾರ್​ ಅವರ ವಿಚಾರದಲ್ಲಿ ಬಿಜೆಪಿ ಯಾವುದೇ ರಾಜಕೀಯ ಮಾಡುತ್ತಿಲ್ಲ : ಡಿ.ವಿ.ಸದಾನಂದ ಗೌಡ -Vishwanews24

ಮಂಡ್ಯ: ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರ ವಿಚಾರದಲ್ಲಿ ಬಿಜೆಪಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ರಮ ಹಣ ಸಂಗ್ರಹಣೆ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಇದು ನಿನ್ನೆ ಮೊನ್ನೆಯದಲ್ಲ, ಹಲವು ದಿನಗಳಿಂದಲೂ ನಡೆಯುತ್ತಿದೆ. ಕಾನೂನು ಏನಿದೆಯೋ ಅದರ ಅನ್ವಯವೇ ಪ್ರಕರಣದ ವಿಚಾರಣೆ ನಡೆಯುತ್ತದೆ. ಇವರು ಅಂತಲ್ಲ, ದೇಶದಲ್ಲಿ ಯಾರೇ ಅಕ್ರಮವಾಗಿ ಹಣ ಸಂಪಾದಿಸಿದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಕೋರ್ಟ್​ ಡಿಕೆಶಿ ಅವರ ಅರ್ಜಿ ವಜಾ ಮಾಡಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಎದುರು ಹಾಜರಾಗಿದ್ದಾರೆ. ಇದನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದರು.

ಸರ್ಕಾರ ರಚನೆಯಾದಾಗ ಸಚಿವ ಸ್ಥಾನ ಸಿಗಬೇಕೆಂಬ ಆಕಾಂಕ್ಷಿಗಳು ಸಹಜವಾಗಿ ಇರುತ್ತಾರೆ. ಆದರೆ, ಹಿರಿಯ ನಾಯಕರು ಅಳೆದು-ತೂಗಿ ಯಾರಿಗೆ ಯಾವ ಸ್ಥಾನ ನೀಡಬೇಕು ಎಂದು ನಿರ್ಧರಿಸುತ್ತಾರೆ. ನಿರಾಸೆಯಾದವರಿಗೆ ಸ್ವಲ್ಪ ದಿನ ಹಾರ್ಟ್​ ಬರ್ನಿಂಗ್​ ಆಗುತ್ತದೆ. ಬೇಸರವಾಗುತ್ತದೆ ಎಂದು ಹೇಳಿದರು.

ಸಚಿವ ಸಿ.ಎಸ್​.ಪುಟ್ಟರಾಜು ಬಿಜೆಪಿ ಸೇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸದಾನಂದಗೌಡ ಅವರು, ನಮ್ಮೊಟ್ಟಿಗೆ ಬರುತ್ತೇವೆ ಎನ್ನುವವರನ್ನು ಪಕ್ಷ ಖಂಡಿತ ಸೇರಿಸಿಕೊಳ್ಳುತ್ತದೆ. ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಅಮಿತ್​ ಷಾ ಸಂಘಟನೆಯಲ್ಲಿ ಮುನ್ನಡೆಯುತ್ತೇವೆ. ಯಾರೇ ಪಕ್ಷಕ್ಕೆ ಬಂದರೂ ಸೇರಿಸಿಕೊಳ್ಳುತ್ತೇವೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago