ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡುವಂತ ಕೇಸು ಇದಲ್ಲ : ಸಿದ್ದರಾಮಯ್ಯ -Vishwanews24
ಮೈಸೂರು: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ನ್ಯಾಚುರಲ್ ಜಸ್ಟೀಸ್ ಇರಬೇಕು. ಆದರೆ, ಇಂದಿನ ದಿನಗಳಲ್ಲಿ ಅದು ಕಾಣೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡುವಂತ ಕೇಸು ಇದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು. ಡಿ.ಕೆ.ಶಿವಕುಮಾರ್ ಅವರು ಕಾನೂನು ಹೋರಾಟ ಮಾಡುತ್ತಿದ್ದಾರೆ. ಹೈಕೋರ್ಟ್ನಲ್ಲಿ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸುತ್ತಿದ್ದಾರೆ ಎಂದರು.
ಯಾರು ಅಧಿಕಾರ ದುರುಪಯೋಗ ಮಾಡುವಂತ ಕೆಲಸ ಮಾಡಬಾರದು. ಇತ್ತೀಚೆಗೆ ಅಧಿಕಾರ ದುರುಪಯೋಗದ ಕೆಲಸ ನಡೆಯುತ್ತಿದೆ ಎನಿಸುತ್ತಿದೆ ಎಂದು ಹೇಳಿದರು. ಅವರುಗಳು ರಾಜಕೀಯದಲ್ಲಿ ಮುಳುಗಿದ್ದು, ಹಾಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಪ್ರತಿಭಟನೆ ನಡೆಸಿದ್ದೇವೆ ಎಂದರು. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
