Featured

ಡಿ ಕೆ ಶಿವಕುಮಾರ್ ನೀಡಿದ್ದ ‘ಐಫೋನ್ ಗಿಫ್ಟ್’ನ್ನು ತಿರಸ್ಕರಿಸಿದ ಬಿಜೆಪಿ ಸಂಸದರು..

ಬೆಂಗಳೂರು: ಕರ್ನಾಟಕ ಸರ್ಕಾರದ ಚಿಹ್ನೆ ಮತ್ತು ಸಚಿವ ಡಿ ಕೆ ಶಿವಕುಮಾರ್ ಅವರ ಫೋಟೋ ಅದರ ಕೆಳಗೆ ಮುದ್ರಣವಾಗಿರುವ ಚರ್ಮದ ಚೀಲವನ್ನು ನಿನ್ನೆ ಕರ್ನಾಟಕದ ಎಲ್ಲಾ ಸಂಸದರಿಗೆ ಕಳುಹಿಸಿಕೊಡಲಾಗಿತ್ತು. ದೆಹಲಿಯಲ್ಲಿ ಕಾವೇರಿ ನದಿ ನೀರಿನ ವಿವಾದ ಮತ್ತು ಇತರ ಕೆಲ ವಿಷಯಗಳ ಕುರಿತು ಚರ್ಚೆ ನಡೆಸಲು ಸಂಸದರಿಗೆ ಈ ರೀತಿಯಲ್ಲಿ ಆಹ್ವಾನ ನೀಡಲಾಗಿತ್ತು. ಆದರೆ ಅದೀಗ ವಿವಾದಕ್ಕೆ ಕಾರಣವಾಗಿದೆ.

ಕಾರಣ ಆ ಚರ್ಮದ ಬ್ಯಾಗಿನ ಒಳಗೆ ಐಫೋನ್-ಎಕ್ಸ್ ಇದ್ದಿದ್ದು. ದುಬಾರಿ ಬೆಲೆಯ ಐಫೋನ್ -ಎಕ್ಸ್ ನೀಡಿ ಎಲ್ಲಾ ಸಂಸದರನ್ನು ಆಹ್ವಾನಿಸಲಾಗಿತ್ತು. ಈ ಗಿಫ್ಟ್ ನ್ನು ಬಿಜೆಪಿ ಸಂಸದರು ಸಾರಾಸಗಟಾಗಿ ತಿರಸ್ಕರಿಸಿದ್ದಲ್ಲದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಅದನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳಲು ನೋಡುತ್ತಿದ್ದಾರೆ. ರಾಜ್ಯದಲ್ಲಿ ಇಷ್ಟು ಸಮಸ್ಯೆಯಿರುವಾಗ, ರೈತರ ಸಾಲ ಮನ್ನಾ ಮಾಡಲು ಎಲ್ಲಿಂದ ಹಣ ತರುವುದು ಎಂದು ಮುಖ್ಯಮಂತ್ರಿಗಳು ಯೋಚಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ರೀತಿಯ ದುಬಾರಿ ಗಿಫ್ಟ್ ನೀಡುವ ಅಗತ್ಯವೇನಿದೆ ಎಂದು ಬಿಜೆಪಿ ಸಂಸದರು ತಿರಸ್ಕರಿಸಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡ್ಡಿದೆ.

ಈ ಸುದ್ದಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಸಂಸದರಿಗೆ ಗಿಫ್ಟ್ ಕೊಟ್ಟಿದ್ದು ನಾನು. ಒಳ್ಳೆಯ ಹೃದಯ ಶ್ರೀಮಂತಿಕೆಯಿಂದ ವೈಯಕ್ತಿಕವಾಗಿ ಗಿಫ್ಟ್ ನೀಡಿದ್ದೇನೆ, ಆದರೆ ಕಾಮಾಲೆ ಕಣ್ಣಿಗೆ ಎಲ್ಲವೂ ಕೆಟ್ಟದಾಗಿಯೇ ಕಾಣುತ್ತದೆ ಎಂದು ಹೇಳಿದ್ದಾರೆ.

ಆದರೆ ಬಿಜೆಪಿಯವರು ಮಾತ್ರ ಇದನ್ನು ಸ್ವಾಗತಿಸಿಲ್ಲ. ದೆಹಲಿಯಲ್ಲಿ ಕರೆದಿರುವ ಸಭೆಯನ್ನು ಬಿಜೆಪಿ ಸಂಸದರು ಸ್ವಾಗತಿಸಿದರೆ ಗಿಫ್ಟ್ ನೀಡುವ ಅಗತ್ಯವಿರಲಿಲ್ಲ ಎಂದಿದ್ದಾರೆ. ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಪಿ ಸಿ ಮೋಹನ್, ಸಂಯಮವನ್ನು ಭೋದಿಸುವ ಸರ್ಕಾರ ದುಂದು ವೆಚ್ಚ ಮಾಡುತ್ತಿದೆ ಎಂದಿದ್ದಾರೆ. ನೈತಿಕ ನೆಲೆಯಲ್ಲಿ, ಸಾರ್ವಜನಿಕ ಹಣವನ್ನು ಪೌರ ಕಾರ್ಮಿಕರಿಗೆ ವೇತನ ನೀಡಲು ಬಳಸಿ ಮತ್ತು ರೈತರ ಸಮಸ್ಯೆಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.

ಬಿಜೆಪಿ ಸಂಸದರು ಸಲಹೆಯೊಂದಿಗೆ ಗಿಫ್ಟ್ ನ್ನು ಹಿಂತಿರುಗಿಸಿದ ನಂತರ ದೆಹಲಿಯಲ್ಲಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಐಫೋನ್ ನ್ನು ಸಂಸದರಿಗೆ ನೀಡಲು ನಮ್ಮ ಸರ್ಕಾರ ಯಾವುದೇ ಪ್ರಸ್ತಾವನೆ ಪಡೆದಿಲ್ಲ. ನಾನು ಕೂಡ ಯಾವ ಸಂಸದರಿಗೂ ಐಫೋನ್ ಉಡುಗೊರೆ ನೀಡಲು ಆದೇಶ ನೀಡಿರಲಿಲ್ಲ. ಅನಧಿಕೃತವಾಗಿ ಕೊಟ್ಟಿದ್ದರೆ ಅದು ನನಗೆ ತಿಳಿದಿಲ್ಲ, ಯಾರು ಗಿಫ್ಟ್ ಕಳುಹಿಸಿದ್ದರು ಎಂಬುದು ಕೂಡ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

2 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

3 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

3 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

4 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

4 hours ago