ಡಿ.ಕೆ.ಶಿವಕುಮಾರ್ ಬಂಧನ : ಪ್ರತಿಭಟನೆ ನಡೆಸಿದ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲು -Vishwanews24

Featured, ರಾಜ್ಯ ನ್ಯೂಸ್

ರಾಮನಗರ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದವರ ಪೈಕಿ 15 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕನಕಪುರದಲ್ಲಿ ಪ್ರತಿಭಟನೆ ನಡೆಸಿದ ಡಿ.ಕೆ.ಶಿವಕುಮಾರ್ ಬೆಂಬಲಿಗರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 15 ಕ್ಕೂ ಹೆಚ್ಚು ಜನರ ಮೇಲೆ ಎಫ್ ಐಆರ್ ದಾಖಲಾಗಿದೆ.

ಪ್ರತಿಭಟನೆ ನಡೆಸುತ್ತಿರುವ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಹಿನ್ನೆಲೆ ಪೊಲೀಸರು ಪ್ರತಿಭಟನೆಕಾರರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕನಕಪುರದಲ್ಲಿ ಎಸ್ ಪಿ ಅನೂಪ್ ಶೆಟ್ಟಿ ಮೊಕ್ಕಾಂ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.