ಬೆಳಗಾವಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಮಾಡಿಸಿ ಯಾರನ್ನು ಹೀರೋ ಮಾಡುವ ಅಗತ್ಯ ನಮಗೆ ಇಲ್ಲ ಎಂದು ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿ ಇಲಾಖೆಯ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಂಧನ ಮಾಡಿರುವುದು ಸ್ವಾಭಾವಿಕ. ಅದರ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯ ಬಿಜೆಪಿಗೆ ಇಲ್ಲ ಎಂದು ಹೇಳಿದರು.
ನಾವು ಕೆಟ್ಟ ರಾಜಕಾರಣ ಮಾಡಿಕೊಂಡು ಬಂದಿಲ್ಲ. ಡಿಕೆ.ಶಿವಕುಮಾರ್ ಬಂಧನ ಮಾಡಿಸಬೇಕಾದ ಅವಶ್ಯಕತೆ, ಹಠ ಇಲ್ಲ. ಅವರನ್ನ ಬಂಧನ ಮಾಡಿಸಿ ಹೀರೊ ಮಾಡಿಸುವ ಅಗತ್ಯನೇ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನವಾಗಿರುವುದು ಸ್ವತಃ ಅವರೆ ಹೇಳಿದ್ದಾರೆ. ನಾವೇ ಮಾಡಿದ ಅಧಿಕಾರಿಗಳು, ನಾವೇ ಕಾನೂನು ರಚನೆ ಮಾಡಿದವರೆ ನಮ್ಮನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ಹೊಣೆ ಎನ್ನುವುದು ತಪ್ಪು ಕಲ್ಪನೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…