ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಪ್ರತಿಭಟನೆಗೆ ಜೆಡಿಎಸ್ ಸಾಥ್ ನೀಡಲಿದೆ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಇಂದು ಕರೆ ನೀಡಿರುವ ಪ್ರತಿಭಟನೆಗೆ ಜೆಡಿಎಸ್ ಸಹ ಸಾಥ್ ನೀಡಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಪ್ರತಿ ಸಲ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ವಿಚಾರಣೆಗೆ ಅವರು ಹಾಜರಾಗಿದ್ದಾರೆ. ಆದರೂ ಅವರನ್ನು ಬಂಧನ ಮಾಡುವ ಅವಶ್ಯಕತೆ ಏನಿತ್ತು ತಮ್ಮ ಅನುಕೂಲಕ್ಕಾಗಿ ಅಧಿಕಾರಿಗಳನ್ನು ಕೇಂದ್ರ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.