ಡಿ.ಕೆ.ಶಿ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ತನಿಖೆ ಸಿಬಿಐಗೆ -Vishwanews24
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಜಾರಿ ನಿರ್ದೇಶನಾಲಯ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ತನಿಖೆ ನಡೆಸಲು ಸಿಬಿಐ ನೆರವನ್ನು ಕೋರಿತ್ತು. ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ, ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರಕ್ಕೆ ಬರೆದಿತ್ತು. ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಗೃಹ ಇಲಾಖೆಯು ಮಾಜಿ ಸಚಿವರ ಮೇಲೆ ತನಿಖೆಗೆ ಅನುಮತಿಯನ್ನು ನೀಡಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಅಕ್ಟೋಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ. ಅಕ್ಟೋಬರ್ 14ಕ್ಕೆ ದೆಹಲಿಯ ಹೈಕೊರ್ಟಿನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಗೆ ನಡೆಯಲಿದೆ.
