Featured

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್ – vishwanews24

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ.ಪಕ್ಷದ ಹಿತದೃಷ್ಟಿಯಿಂದ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಡೆಸುತ್ತಿದ್ದಾರೆ. ಪಕ್ಷದ ಆದೇಶಕ್ಕೋಸ್ಕರ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ. ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆ ಅಲ್ಲ. ನಮ್ಮ ಗುರಿ ಇರುವುದು 2028ರ ಚುನಾವಣೆ. ಪಕ್ಷದ ತೀರ್ಮಾನಕ್ಕೋಸ್ಕರ ಶಾಸಕರ ಹಿತದೃಷ್ಟಿಯಿಂದ ನೊಂದ ಕಾರ್ಯಕರ್ತರ ಹಿತದೃಷ್ಟಿಯಿಂದ ಸಹನೆಯಿಂದ ಕಾಯುತ್ತಿದ್ದಾರೆ. ನಾನು ಮೊದಲೇ ಹೇಳಿದ್ದೆ ಡಿ.ಕೆ.ಶಿವಕುಮಾರ್ ಅವರ ಹಣೆ ಬರಹದಲ್ಲಿ ಸಿಎಂ ಆಗಬೇಕು ಎಂದು ಬರೆದಿದ್ದರೆ ಆಗುತ್ತಾರೆ ಅಂತ. ಈಗಲೂ ಅದನ್ನೇ ಹೇಳುತ್ತೇನೆ. ಡಿ.ಕೆ.ಶಿವಕುಮಾರ್ ಪಕ್ಷ ನಿಷ್ಠ ವ್ಯಕ್ತಿ. ಕೆಲವರು ವ್ಯಕ್ತಿ ನಿಷ್ಠರು ಇರುತ್ತಾರೆ, ಇನ್ನೂ ಕೆಲವರು ಅಧಿಕಾರಕ್ಕಾಗಿ ಇರುತ್ತಾರೆ. ಈಗ ಅನಿವಾರ್ಯವಾಗಿ ಸೆಷನ್ ಬಂದಿದೆ. ಇವತ್ತು ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಕ್ಕು ಕಿತ್ತುಕೊಂಡಿದೆ ಎಂದರು.

ಕಾಂಗ್ರೆಸ್‌ಗೆ ಎಲ್ಲಾ ವರ್ಗದ ಮತಗಳು ಸಹ ಬೇಕು. ಒಕ್ಕಲಿಗರು, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲರ ಮತಗಳು ಕಾಂಗ್ರೆಸ್‌ಗೆ ಬೇಕಾಗಿದೆ. ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ಡಿಕೆಶಿವಕುಮಾರ್ ಅವರು ಎಲ್ಲ ನೋವುಗಳಲ್ಲೂ ಪಕ್ಷದ ಜೊತೆ ಇದ್ದಾರೆ. ಪಂಚಾಯತ್ ಚೇರಮನ್‌ಗಳೇ ಅಧಿಕಾರ ಬಿಡಲ್ಲ, ಅಣ್ಣ ಇನ್ವಿಟೇಷನ್‌ಗೆ ಹೆಸರು ಹಾಕಿಸಿದ್ದೀನಿ ಅಂತಾರೆ, ಮಾರ್ಚ್ ಕಳೆಯಲಿ ಅಂತಾರೆ ಕುರ್ಚಿಯನ್ನು ಅಷ್ಟು ಸುಲಭವಾಗಿ ಬಿಡಲ್ಲ. ರಾಜಕಾರಣದಲ್ಲಿ ನಂಬಿಕೆಗಳು ತುಂಬಾ ಮುಖ್ಯವಾಗುತ್ತದೆ. ರಾಹುಲ್ ಗಾಂಧಿ ರಾಷ್ಟ್ರೀಯ ಅಧ್ಯಕ್ಷರು. ಅವರು ಎಲ್ಲ ರೀತಿಯಲ್ಲೂ ಯೋಚನೆ ಮಾಡುತ್ತಾರೆ. ಎಲ್ಲರನ್ನೂ ಒಪ್ಪಿಸಿ ರಾಹುಲ್ ಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಧಿಕಾರನೂ ಶಾಶ್ವತ ಅಲ್ಲ, ತಾಳ್ಮೆನೂ ಶಾಶ್ವತ ಅಲ್ಲ ಎಂದು ನುಡಿದರು.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

33 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

51 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

1 hour ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

2 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago