ಡಿ.ಕೆ.ಶಿ ಬಂಧನ : ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ :ಎಚ್.ಡಿ.ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ರಾಜಕೀಯ ದುರದ್ದೇಶದ ಪರಮಾವಧಿ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನಧಿಕೃತ ತುರ್ತು ಪರಿಸ್ಥಿತಿಯನ್ನು ನೋಡುವಂತಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇಡಿ ಅಧಿಕಾರಿಗಳು ಕರೆದಾಗಲೆಲ್ಲ ಡಿ.ಕೆ.ಶಿವಕುಮಾರ್ ಹಾಜರಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದಲೂ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಆದರೂ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾನೂನು ರೀತಿ ಕ್ರಮ ಕೈಗೊಳ್ಳಲು ನಮ್ಮ ಅಭ್ಯಂತರವೇನೂ ಇಲ್ಲ ಎಂದರು. ಆದರೆ ಕೇಂದ್ರ ಸರ್ಕಾರ ಸಿಬಿಐ, ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಆರೋಪವಿದೆ. ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ಇಂತಹ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.