ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ರಾಜಕೀಯ ದುರದ್ದೇಶದ ಪರಮಾವಧಿ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನಧಿಕೃತ ತುರ್ತು ಪರಿಸ್ಥಿತಿಯನ್ನು ನೋಡುವಂತಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಟೀಕಿಸಿದ್ದಾರೆ.
ಇಡಿ ಅಧಿಕಾರಿಗಳು ಕರೆದಾಗಲೆಲ್ಲ ಡಿ.ಕೆ.ಶಿವಕುಮಾರ್ ಹಾಜರಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದಲೂ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಆದರೂ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾನೂನು ರೀತಿ ಕ್ರಮ ಕೈಗೊಳ್ಳಲು ನಮ್ಮ ಅಭ್ಯಂತರವೇನೂ ಇಲ್ಲ ಎಂದರು. ಆದರೆ ಕೇಂದ್ರ ಸರ್ಕಾರ ಸಿಬಿಐ, ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಆರೋಪವಿದೆ. ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ಇಂತಹ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…