ಬೆಂಗಳೂರು : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುವುದರ ಕುರಿತು ನಿನ್ನೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕುರಿತು ಮಾತನಾಡಿದರು.ಇದಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ ತಿರುಗೇಟು ನೀಡಿದ್ದು ನಮ್ಮ ದೇಶ ಭವ್ಯ ಭಾರತ ಹೀಗಾಗಿ ದೇಶವನ್ನು ಒಡೆಯುವಂತಹ ಮಾತುಗಳನ್ನು ಯಾರು ಆಡಬಾರದು ಎಂದು ತಿರುಗೇಟು ನೀಡಿದರು.
ಈ ವಿಷಯದ ಕುರಿತಾಗಿ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಅಂತ ಡಿಕೆ ಸುರೇಶ್ ಗೆ ತಿರುಗೇಟು ಕೊಟ್ರು. ಸಂಸದ ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕಾದರೆ ಕೋಟ್ಯಾಂತರ ಜನರ ಬಲಿದಾನವಾಗಿದೆ.
ನೂರಾರು ವರ್ಷ ಹೋರಾಟಗಳು ನಡೆದಿವೆ. ಗಾಂಧೀಜಿಯಿಂದ ಹಿಡಿದು ಅನೇಕ ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಸ್ವಾತಂತ್ರ್ಯ ತರಲು, ದೇಶ ಒಗ್ಗೂಡಿಸಲು ಹೋರಾಟ ಮಾಡಿದ್ದಾರೆ. ಅನೇಕರು ಹೋರಾಟಗಾರರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಯಾರೇ ಆದರೂ ದೇಶ ಒಗ್ಗೂಡಿಸುವ ಮಾತಾಡಬೇಕು. ಅದು ಬಿಟ್ಟು ಒಡೆಯೋ ಮಾತಾಡೋದು ಸರಿಯಲ್ಲ ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…